ವಾರ್ತಾ ಇಲಾಖೆಗೆ ಪತ್ರಕರ್ತರ ವಾಹನ ಹಸ್ತಾಂತರ- ಸಚಿವ ಡಿ.ಸುಧಾಕರ್

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರದ ಮುರುಘ ರಾಜೇಂದ್ರ ಕ್ರೀಡಾಂಗಣದಲ್ಲಿ ಶುಕ್ರವಾರ ಪತ್ರಕರ್ತರ ಹೊಸ ವಾಹನವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹಸಿರು ನಿಶಾನೆ ಮೂಲಕ ಚಾಲನೆ ನೀಡಿದರು.

      ಈ ವೇಳೆ ಸ್ವತಃ ಸಚಿವ ಡಿ.ಸುಧಾಕರ್ ಅವರೇ ಪತ್ರಕರ್ತರ ನೂತನ ವಾಹನವನ್ನು ನಗರದ ಮುರುಘಾ ರಾಜೇಂದ್ರ ಕ್ರೀಡಾಂಗಣದಿಂದ ಜಿಲ್ಲಾ ಪಂಚಾಯತ್ ಕಚೇರಿವರೆಗೂ ವಾಹನ ಚಲಾಯಿಸಿದ್ದು ವಿಶೇಷವಾಗಿತ್ತು.  ಎಲ್ಲ ಪತ್ರಕರ್ತರು, ಗಣ್ಯಮಾನ್ಯರು ಇದೇ ವಾಹನದಲ್ಲಿ ಜಿಲ್ಲಾ ಪಂಚಾಯತ್ ವರೆಗೂ ಪ್ರಯಾಣಿಸಿದರು.

- Advertisement - 

      ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅವರು ಶಾಸಕರ ವಿಶೇಷ ಪ್ರದೇಶಾಭಿವೃದ್ಧಿ ನಿಧಿ ಯೋಜನೆಯಡಿ ಅಂದಾಜು ರೂ.27 ಲಕ್ಷ ವೆಚ್ಚದಲ್ಲಿ ಒಂದು ಸ್ವರಾಜ್ ಮಜ್ಡಾ ವಾಹನವನ್ನು ಪತ್ರಕರ್ತರಿಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಹಸ್ತಾಂತರ ಮಾಡಿದರು.      

ಈ ಸಂದರ್ಭದಲ್ಲಿ ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ. ತಾಜ್‍ಪೀರ್, ನಗರಸಭೆ ಅಧ್ಯಕ್ಷೆ ಸುಮಿತಾ ಬಿ.ಎನ್.ರಾಘವೇಂದ್ರ, ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ,

- Advertisement - 

ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ದಿನೇಶ್ ಗೌಡಗೆರೆ, ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಸೇರಿದಂತೆ ಹಲವು ಪತ್ರಕರ್ತರು, ಗಣ್ಯರು ಇದ್ದರು.

 

Share This Article
error: Content is protected !!
";