ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದಲಿತರು ಎಂದರೆ ಭಾರತೀಯ ಕಾಂಗ್ರೆಸ್ ಹಾಗೂ ಕರ್ನಾಟಕ ಕಾಂಗ್ರೆಸ್ ಕಸಕ್ಕಿಂತಲೂ ಕೀಳಾಗಿ ನೋಡುತ್ತಲೇ ಇದೆ ಎಂದು ಬಿಜೆಪಿ ಟೀಕಿಸಿದೆ.
ವೋಟ್ ಬ್ಯಾಂಕ್ ಗಾಗಿ ದಲಿತರನ್ನು ದುರುಪಯೋಗ ಪಡಿಸಿಕೊಂಡು ಅವರನ್ನು ಸದಾಕಾಲವೂ ತುಳಿಯುತ್ತಿದೆ. ಅಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಂದ ಹಿಡಿದು ಇಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರವರೆಗೂ ಅವಮಾನ ಮಾಡುತ್ತಲೇ ಇದೆ ಎಂದು ಬಿಜೆಪಿ ಆರೋಪಿಸಿದೆ.
ಭ್ರಷ್ಟ ಸಿಎಂ ಸಿದ್ದರಾಮಯ್ಯ ಅವರ ದಲಿತ ವಿರೋಧಿ ನಡೆಯನ್ನು ಆ ದಿನಗಳ ಡಿ.ಕೆ.ಶಿವಕುಮಾರ್ ಅವರು ಅನುಸರಿಸುತ್ತಿದ್ದಾರೆ ಎಂದು ಬಿಜೆಪಿ ದೂರಿದೆ.