ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
2025
ರ ಮೈಸೂರು ದಸರಾ ಹಬ್ಬವನ್ನು ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಾನು ಮುಷ್ತಾಕ್​ ಅವರ ಹೃದಯ ದೀಪಕೃತಿಗೆ ಬೂಕರ್ ಪ್ರಶಸ್ತಿ ಸಿಕ್ಕಿದೆ. ಕರ್ನಾಟಕದ ಮಹಿಳೆಗೆ ಬೂಕರ್ ಸಿಕ್ಕಿದ್ದು ಬಹಳ ಸಂತೋಷವಾಗಿದೆ. ಹೋರಾಟದ ಹಿನ್ನೆಲೆಯಿಂದ ಬಂದ ಬಾನು ಮುಷ್ತಾಕ್ ಅವರು, ರೈತ ಮತ್ತು ಕನ್ನಡ ಚಳವಳಿಯಲ್ಲೂ ಕೆಲಸ ಮಾಡಿದ್ದಾರೆ. ಹೀಗಾಗಿ ಅವರನ್ನು ದಸರಾ ಮಹೋತ್ಸವದ ಉದ್ಘಾಟನೆಗೆ ಆಹ್ವಾನಿಸಿದ್ದೇವೆ ಎಂದು ತಿಳಿಸಿದರು.

- Advertisement - 

ದಸರಾದಲ್ಲಿ ಏರ್ ಶೋ:
ದಸರಾ ಉತ್ಸವ
11 ದಿನ ನಡೆಯಲಿದೆ. ಸೆಪ್ಟೆಂಬರ್‌22 ರಿಂದ ದಸರಾ ಆರಂಭ ಆಗುತ್ತದೆ. ಅಕ್ಟೋಬರ್ 2ರಂದು ವಿಜಯ ದಶಮಿ. ಭಾನು ಮುಸ್ತಾಕ್ ಅವರಿಗೆ ಗೌರವದಿಂದ ಜಿಲ್ಲಾಡಳಿತ ಆಹ್ವಾನ ನೀಡಲಿದೆ. ದಸರಾದಲ್ಲಿ ಏರ್ ಶೋಗೆ ಅನುಮತಿ ಸಿಕ್ಕಿದೆ. ಇದಕ್ಕಾಗಿ ನಾನು ರಕ್ಷಣಾ ಸಚಿವ ರಾಜನಾಥ್ ಸಿಂಗ್​ ಅವರಿಗೆ ಪತ್ರ ಬರೆದಿದ್ದೆ. ಅವರಿಗೂ ದಸರಾಗೆ ಆಹ್ವಾನಿಸಿದ್ದೇನೆ ಎಂದು ಹೇಳಿದರು.

ಪಾದಯಾತ್ರೆಯಲ್ಲಿ ಭಾಗಿಯಾಗುವೆ:
ಲೋಕಸಭಾ ವಿಪಕ್ಷ ನಾಯಕ ‌ರಾಹುಲ್ ಗಾಂಧಿ ಅವರು ಚುನಾವಣಾ ಅಕ್ರಮದ ಬಗ್ಗೆ ಬಿಹಾರದಲ್ಲಿ ಪಾದಯಾತ್ರೆ ಹಮ್ಮಿಕೊಂಡಿದ್ದು ನಾನೂ ಒಂದು ದಿನ ಭಾಗಿಯಾಗುತ್ತೇನೆ. ಆಗಸ್ಟ್
29ರಂದು ಯಾತ್ರೆಯಲ್ಲಿ ಭಾಗಿಯಾಗುತ್ತೇನೆ ಎಂದು ಮಾಹಿತಿ ನೀಡಿದರು.

- Advertisement - 

ಬೂಕರ್ ಪ್ರಶಸ್ತಿ:
ಕರ್ನಾಟಕ ಹೆಮ್ಮೆಯ ಮಹಿಳೆ ಬಾನು ಮುಷ್ತಾಕ್ ಅವರಿಗೆ ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ (ಮೇ
21, 2025) ಲಭಿಸಿತು. ಬಾನು ಅವರು ಬರೆದಿದ್ದ ಹಸೀನಾ ಮತ್ತು ಇತರ ಕಥೆಗಳು ಕೃತಿಯನ್ನು ದೀಪಾ ಭಸ್ತಿ ಇಂಗ್ಲಿಷ್​ಗೆ ಅನುವಾದಿಸಿದ್ದರು. ಈ ಕೃತಿ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಪಾತ್ರವಾಗಿದೆ.

ಬೂಕರ್ ಪ್ರಶಸ್ತಿಗೆ ಬಾನು ಮುಷ್ತಾಕ್ ಅವರ ಇಂಗ್ಲಿಷ್ ಅನುವಾದಿತ ಕೃತಿ “ಹಾರ್ಟ್ ಲ್ಯಾಂಪ್” ಶಾರ್ಟ್ ಲಿಸ್ಟ್​ಗೆ ಆಯ್ಕೆಯಾಗಿತ್ತು. ಬೂಕರ್ ಪ್ರಶಸ್ತಿಗಾಗಿ ಲಿಸ್ಟ್ ಆಗಿದ್ದ ಒಟ್ಟು 6 ಕೃತಿಗಳಲ್ಲಿ ಅಂತಿಮವಾಗಿ ಕನ್ನಡದ ಲೇಖಕಿ ಬಾನು ಮುಷ್ತಾಕ್ ಕೃತಿ ಪ್ರಶಸ್ತಿ ದೊರೆಯಿತು.

ಲಂಡನ್​​​ನಲ್ಲಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆ ಭಾನು ಮುಷ್ತಾಕ್ ಮತ್ತು ದೀಪಾ ಭಸ್ತಿ ಇಬ್ಬರೂ ಪರಸ್ಪರ ಅಪ್ಪಿಕೊಂಡು ಹರ್ಷ ವ್ಯಕ್ತಪಡಿಸಿದರು. ಕನ್ನಡ ಸಾಹಿತ್ಯಕ್ಕೆ ದೊರೆತ ಮೊದಲ ಬೂಕರ್ ಪ್ರಶಸ್ತಿ ಇದಾಗಿದೆ. ಈ ಪ್ರಶಸ್ತಿಯಿಂದಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕನ್ನಡ ಸಾಹಿತ್ಯಕ್ಕೆ ಮನ್ನಣೆ ಸಿಕ್ಕಂತಾಗಿದೆ. ಅಂತಾರಾಷ್ಟ್ರೀಯ ಬೂಕರ್ ಸಾಹಿತ್ಯ ಪ್ರಶಸ್ತಿ 50 ಸಾವಿರ ಪೌಂಡ್ ನಗದು ಬಹುಮಾನ ಒಳಗೊಂಡಿದೆ. ಈ ಹಣವನ್ನು ಬಾನು ಮುಷ್ತಾಕ್ ಮತ್ತು ಕೃತಿಯನ್ನು ಇಂಗ್ಲಿಷ್​​ಗೆ ಅನುವಾದಿಸಿದ ದೀಪಾ ಭಸ್ತಿ ಅವರಿಗೆ ಹಂಚಲಾಗಿತ್ತು. ಬೂಕರ್ ಪ್ರಶಸ್ತಿಗೆ ಪಾತ್ರವಾಗಿರುವ ಬಾನು ಮುಷ್ತಾಕ್ ಅವರ ಹಸೀನಾ ಮತ್ತು ಇತರ ಕಥೆಗಳು ಕಥಾ ಸಂಕಲನ ಮುಸ್ಲಿಂ ಸಮುದಾಯದ ಬಾಲಕಿಯರ ಮತ್ತು ಇತರ ಹೆಣ್ಣುಮಕ್ಕಳ ದೈನಂದಿನ ಜೀವನ ಕುರಿತದ್ದಾಗಿದೆ.

 

 

Share This Article
error: Content is protected !!
";