ಜೆಡಿಎಸ್ ಕಚೇರಿಯಲ್ಲಿ ದಾಸಶ್ರೇಷ್ಠ ಕನಕದಾಸರ ಜಯಂತಿ ಆಚರಣೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜೆಡಿಎಸ್ ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ದಾಸಶ್ರೇಷ್ಠ ವಿಶ್ವಮಾನವ ಶ್ರೀ ಭಕ್ತ ಕನಕದಾಸರ 538ನೇ ಜಯಂತೋತ್ಸವ ಕಾರ್ಯಕ್ರಮವನ್ನು ಮಾಜಿ ಶಾಸಕರು ಹಾಗೂ ಬೆಂಗಳೂರು ಮಹಾನಗರ ಘಟಕದ ಅಧ್ಯಕ್ಷ ಎಚ್.ಎಂ. ರಮೇಶಗೌಡ ಅವರ ಅಧ್ಯಕ್ಷತೆಯಲ್ಲಿ ಜರುಗಿತು.

ಈ ಕಾರ್ಯಕ್ರಮದಲ್ಲಿ  ಮಾಜಿ ಸಚಿವರಾದ ಲೀಲಾದೇವಿ ಆರ್ ಪ್ರಸಾದ್ , ವಿಧಾನ ಪರಿಷತ್‌ಸದಸ್ಯರಾದ ಟಿ.ಎನ್ ಜವರಾಯಗೌಡ, ಟಿ.ಎ. ಶರವಣ, ಮಾಜಿ ಶಾಸಕ ಕೆ.ಎ. ತಿಪ್ಪೇಸ್ವಾಮಿ, ನಗರ ಮಹಿಳಾ ವಿಭಾಗದ ಅಧ್ಯಕ್ಷ ಶೈಲಾ ಸಂತೋಜಿ ರಾವ್, ಚನ್ನೇನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರು ಹಾಗೂ ಹಾಲಿ ಸದಸ್ಯೆ ತಾರಾ ಲೋಕೇಶ್,

- Advertisement - 

ರಾಜ್ಯ ಮಹಿಳಾ ವಿಭಾಗದ ಮಾಜಿ ಅಧ್ಯಕ್ಷೆ ಶೀಲಾ ನಾಯಕ್, ನಗರ  ಕಾರ್ಯಾಧ್ಯಕ್ಷ ಕೆ.ವಿ. ನಾರಾಯಣಸ್ವಾಮಿ, ಮಹಾಪ್ರಧಾನ ಕಾರ್ಯದರ್ಶಿ ಎಸ್ ರಮೇಶ್, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಧ್ಯಕ್ಷ ತುಳಸಿ ರಾಮ್, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಅಧ್ಯಕ್ಷ ಪ್ರವೀಣ್ ಕುಮಾರ್,

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಅಧ್ಯಕ್ಷ ನಾಗೇಶ್ವರ್ ರಾವ್, ಕಾರ್ಮಿಕ ವಿಭಾಗದ ಅಧ್ಯಕ್ಷ ಎಂ ಗೋಪಾಲ, ಸಾರಿಗೆ ವಿಭಾಗದ ಅಧ್ಯಕ್ಷ ತಿಮ್ಮೇಗೌಡ, ಶಾಂತಿನಗರ ಕ್ಷೇತ್ರದ ಅಧ್ಯಕ್ಷ ಆನಂದ ಕಣ್ಣನ್, ಹಿಂದುಳಿದ ವರ್ಗದ ಮುಖಂಡ ಶಿವಣ್ಣ ಹಾಗೂ ಪಕ್ಷದ ಹಲವು ಮುಖಂಡರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

- Advertisement - 

ಬೆಂಗಳೂರು ನಗರ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಸಿಎಂ ನಾಗರಾಜ್ ರವರು ಈ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಿದ್ದರು.

 

 

 

 

Share This Article
error: Content is protected !!
";