ಮದ್ಯ ಮಾರಾಟ ನಿಷೇಧಿಸಿ ಡಿಸಿ ಆದೇಶ

News Desk

ಚಂದ್ರವಳ್ಳಿ ನ್ಯೂಸ್, ಬಳ್ಳಾರಿ:

       ಗೌರಿ ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಾದ್ಯಂತ ಗಣಪತಿ ವಿಸರ್ಜನೆ ದಿನಗಳಾದ 3ನೇ, 5ನೇ ದಿನ ಮತ್ತು 11 ನೇ ದಿನ (ಸಿರುಗುಪ್ಪ ತಾಲ್ಲೂಕು ಮಾತ್ರ) ಗಳಂದು ಮದ್ಯ ಮಾರಾಟ, ಮದ್ಯ ಸಾಗಾಣಿಕೆ ಮಾಡದಂತೆ, ಮದ್ಯದಂಗಡಿ, ಬಾರ್-ರೆಸ್ಟೋರೆಂಟ್‌ಗಳನ್ನು ತೆರೆಯದಂತೆ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21 ರನ್ವಯ ಪ್ರದತ್ತ ಅಧಿಕಾರ ಚಲಾಯಿಸಿ, ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಯೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.

       ಜಿಲ್ಲೆಯಾದ್ಯಂತ ಗಣಪತಿ ವಿಸರ್ಜನೆಯ ಮೂರನೇ ದಿನವಾದ ಸೆ.09 ರಂದು ಬೆಳಿಗ್ಗೆ 06 ಗಂಟೆಯಿAದ ಸೆ.10 ರ ಬೆಳಿಗ್ಗೆ 06 ಗಂಟೆಯವರೆಗೆ ಮತ್ತು ಐದನೇ ದಿನವಾದ ಸೆ.11 ರಂದು ಬೆಳಿಗ್ಗೆ 06 ಗಂಟೆಯಿAದ ಸೆ.12 ರ ಬೆಳಿಗ್ಗೆ 06 ಗಂಟೆಯವರೆಗೆ ನಿಷೇಧಿಸಲಾಗಿದೆ.

       ಸಿರುಗುಪ್ಪ ತಾಲ್ಲೂಕಿನಲ್ಲಿ ಮಾತ್ರ ಗಣಪತಿ ವಿಸರ್ಜನೆಯ 11ನೇ ದಿನವಾದ ಸೆ.17 ರಂದು ಬೆಳಿಗ್ಗೆ 06 ಗಂಟೆಯಿAದ ಸೆ.18 ಬೆಳಿಗ್ಗೆ 06 ಗಂಟೆಯವರೆಗೆ ಮದ್ಯ ಮಾರಾಟ, ಮದ್ಯ ಸಾಗಾಣಿಕೆ ಹಾಗೂ ಮದ್ಯದಂಗಡಿ, ಬಾರ್-ರೆಸ್ಟೋರೆಂಟ್‌ಗಳನ್ನು ತೆರೆಯುವಂತಿಲ್ಲ.

       ಈ ಆದೇಶವು ಡಿಸ್ಟಲರೀಸ್ ರಾಜ್ಯ ವಿವಿಧ ಕೆಎಸ್‌ಪಿಬಿಸಿಎಲ್ ಡಿಪೊಗಳಿಗೆ ದಾಸ್ತಾನು ವಿಲೇವಾರಿ ಮಾಡಲು ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಆದೇಶದಲ್ಲಿ ತಿಳಿಸಿದ್ದಾರೆ.

 

 

 

- Advertisement -  - Advertisement -  - Advertisement - 
Share This Article
error: Content is protected !!
";