ಸಮೀಕ್ಷಾ ಕಾರ್ಯಕ್ಕೆ ವರದಿ ಮಾಡಿಕೊಳ್ಳದ 68 ಗಣತಿದಾರರಿಗೆ ನೋಟಿಸ್-ಶಿಸ್ತು ಕ್ರಮ : ಡಿಸಿ ವೆಂಕಟೇಶ್

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ ಸೆ. 22 ರಿಂದ ಪ್ರಾರಂಭಿಸಿದ್ದು, ಗಣತಿ ಕಾರ್ಯಕ್ಕೆ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.  ಆದರೆ ಚಿತ್ರದುರ್ಗ ತಾಲ್ಲೂಕಿನಲ್ಲಿ ಇದುವರೆಗೂ ಗಣತಿ ಕಾರ್ಯಕ್ಕೆ ವರದಿ ಮಾಡಿಕೊಳ್ಳದಿರುವ 68 ಗಣತಿದಾರರಿಗೆ ನೋಟಿಸ್ ಜಾರಿಗೊಳಿಸಲಾಗಿದ್ದು, ಶಿಸ್ತು ಕ್ರಮಕ್ಕೂ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ತಿಳಿಸಿದ್ದಾರೆ.

ರಾಜ್ಯದ ಮುಖ್ಯಮಂತ್ರಿಗಳು ಕೂಡ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಕಾರ್ಯವನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು,  ಗೈರು ಮತ್ತು ನಿರ್ಲಕ್ಷ್ಯ ತೋರುವ ಸಿಬ್ಬಂದಿಗಳ ಮೇಲೆ ಕಠಿಣ ಕ್ರಮ ಜರುಗಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

- Advertisement - 

ಈ ಕುರಿತಂತೆ ಸಮೀಕ್ಷಾ ಕರ್ತವ್ಯಕ್ಕೆ ಗೈರಾದ ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದಾಗ್ಯೂ ಚಿತ್ರದುರ್ಗ ತಾಲ್ಲೂಕಿನಲ್ಲಿಯೇ ಸುಮಾರು 68 ಗಣತಿದಾರರು, ಸಮೀಕ್ಷಾ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳದಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ.  ಹೀಗಾಗಿ ಈ ಎಲ್ಲ 68 ಗಣತಿದಾರರಿಗೂ ನೋಟಿಸ್ ಜಾರಿಗೊಳಿಸಲಾಗಿದ್ದು, ಶಿಸ್ತು ಕ್ರಮಕ್ಕೂ ಪ್ರಕ್ರಿಯೆ ಆರಂಭಿಸಲಾಗಿದೆ.  

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯಕ್ಕೆ ಇಲ್ಲಸಲ್ಲದ ನೆಪವೊಡ್ಡಿ, ಗೈರು ಹಾಜರಾದಲ್ಲಿ ಅಥವಾ ನಿರ್ಲಕ್ಷö್ಯ ತೋರಿದಲ್ಲಿ ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ.  ಅಂತಹವರ ವಿರುದ್ಧ ಕಠಿಣ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಎಚ್ಚರಿಕೆ ನೀಡಿದ್ದಾರೆ. 

- Advertisement - 

 

 

Share This Article
error: Content is protected !!
";