ಎದೆಗೆ ಬಿದ್ದ ಅಕ್ಷರ, ಭೂಮಿಗೆ ಬಿದ್ದ ಬೀಜ ಫಲ ಕೊಟ್ಟೇ ಕೊಡುತ್ತದೆ-ಡಿಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು ದಕ್ಷಿಣ:
ಬೆಂಗಳೂರು ದಕ್ಷಿಣ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಹೊಂಗನೂರಿನಲ್ಲಿ ಡಾ. ವೆಂಕಟಪ್ಪ ಕಣ್ವ ಫೌಂಡೇಶನ್ ನಿರ್ಮಿಸಿರುವ ಶ್ರೀಮತಿ ಚನ್ನಮ್ಮ ಮಂಚೇಗೌಡ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡದ ಉದ್ಘಾಟನೆಯನ್ನು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ
, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಮಧು ಬಂಗಾರಪ್ಪ ಅವರೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೆರವೇರಿಸಿದರು.

ಬೆಂಗಳೂರು ದಕ್ಷಿಣ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಹೊಂಗನೂರಿನಲ್ಲಿ ಡಾ. ವೆಂಕಟಪ್ಪ ಕಣ್ವ ಫೌಂಡೇಶನ್ ವತಿಯಿಂದ ನಿರ್ಮಿಸಿರುವ ಶ್ರೀಮತಿ ಚನ್ನಮ್ಮ ಮಂಚೇಗೌಡ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಶಿವಕುಮಾರ್,

- Advertisement - 

ಕಣ್ವ ಫೌಂಡೇಶನ್‌ನ ಮೂಲಕ ಡಾ. ವೆಂಕಟಪ್ಪ ಅವರು ಗ್ರಾಮೀಣ ಭಾಗದಲ್ಲಿ ಶಾಲೆಯನ್ನು ಕಟ್ಟಿಸಿ ಸಮಾಜದ ಋಣವನ್ನು ತೀರಿಸುವ ಕೆಲಸ ಮಾಡಿರುವುದು ಶ್ಲಾಘನೀಯ ಎಂದು ತಿಳಿಸಿದರು.

ನೂತನ ಕೆಪಿಎಸ್‌ ಶಾಲೆಯನ್ನು ಮಕ್ಕಳ ಅಮೃತ ಹಸ್ತದಿಂದ ಉದ್ಘಾಟಿಸಿದ್ದೇವೆ. ಶಾಲೆಯನ್ನು ನಿರ್ಮಿಸಿದ ವೆಂಕಟಪ್ಪನವರು ತಮ್ಮಂತೆಯೇ ಸಮಾಜಕ್ಕೆ ಕೊಡುಗೆ ನೀಡಬೇಕೆಂದು ಮಕ್ಕಳಿಂದ ದೀಪ ಬೆಳಗಿಸುವ ಕಾರ್ಯ ಮಾಡಿಸಿದ್ದಾರೆ. ದೀಪದಿಂದ ದೀಪ ಬೆಳಗುತ್ತದೆ.

- Advertisement - 

ಅಕ್ಷರದಿಂದ ಬದುಕು ಬೆಳಗುತ್ತದೆ. ದೇಗುಲ ಸಮಾನವಾಗಿರುವ ಶಾಲೆಯಲ್ಲಿ ಶಿಕ್ಷಕರು ಕಲಿಸುವ ಅಕ್ಷರದಿಂದ ಮಕ್ಕಳ ಭವಿಷ್ಯ ಉಜ್ವಲವಾಗಲಿ ಎಂಬುದು ನಮ್ಮ ಆಶಯ ಎಂದು ಡಿಸಿಎಂ ಶಿವಕುಮಾರ್ ಹೇಳಿದರು.

ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರು ಇಂದು ಬೃಹದಾಕಾರವಾಗಿ ಬೆಳೆಯುತ್ತಿದೆ. ದೇಶದ ವಿವಿಧ ಮೂಲೆಯಿಂದ ಬೆಂಗಳೂರು ನಗರಕ್ಕೆ ಹಲವಾರು ಜನರು ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ವಲಸೆ ಬರುತ್ತಿದ್ದಾರೆ. ನಮ್ಮ ನಾಡಿನ ಮಕ್ಕಳಿಗೆ ಗ್ರಾಮೀಣ ಭಾಗದಲ್ಲಿಯೇ ಗುಣಮಟ್ಟದ ಶಿಕ್ಷಣ ಒದಗಿಸಲು ನಮ್ಮ ಸರ್ಕಾರ ಬದ್ಧವಿದೆ. ಉದ್ಯೋಗದ ಬಗ್ಗೆ ಯೋಚಿಸದೇ ನೀವು ಇರುವ ಸ್ಥಳದಲ್ಲಿಯೇ ಉದ್ಯಮಿಗಳಾಗುವ ಕನಸನ್ನು ಮಕ್ಕಳು ಕಾಣಬೇಕು ಎಂದರು.

ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸಲು ಸರ್ಕಾರ ಕರ್ನಾಟಕ ಪಬ್ಲಿಕ್ ಶಾಲೆಯನ್ನು ನಿರ್ಮಿಸುತ್ತಿದೆ. ಎಲ್‌ಕೆಜಿಯಿಂದ ಪಿಯುಸಿವರೆಗೆ ಒಂದೇ ಶಾಲೆಯಲ್ಲಿ ವಿದ್ಯಾರ್ಥಿಗಳು ವಿದ್ಯಾಭ್ಯಾಸವನ್ನು ಮಾಡಬಹುದು. ಕೆಪಿಎಸ್‌ ಶಾಲೆಗಳಲ್ಲಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಬೋಧನಾ ವ್ಯವಸ್ಥೆ ಅಳವಡಿಸುವ ಮೂಲಕ ಸರ್ಕಾರವು ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುತ್ತಿದೆ ಎಂದು ಶಿವಕುಮಾರ್ ತಿಳಿಸಿದರು.

ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.  ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ಮಧು ಬಂಗಾರಪ್ಪ, ಕಣ್ವ ಫೌಂಡೇಶನ್ ಎಂಡಿ ಡಾ. ವೆಂಕಟಪ್ಪ ಸೇರಿದಂತೆ ಇತರೆ ಗಣ್ಯರು ಹಾಜರಿದ್ದರು.

 

Share This Article
error: Content is protected !!
";