ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಆಗಸ್ಟ್ 10ರಂದು ಬಹು ನಿರೀಕ್ಷಿತ ಮೆಟ್ರೋ ಹಳದಿ ಮಾರ್ಗವನ್ನು ಪ್ರಧಾನಿಮಂತ್ರಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ. ಇದರ ಅಂಗವಾಗಿ ಉಪಮಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮಂಗಳವಾರ ಮೆಟ್ರೋ ಹಳದಿ ಮಾರ್ಗದಲ್ಲಿ ಪ್ರಯಾಣಿಸುವ ಮೂಲಕ ಕಾಮಗಾರಿ ಹಾಗೂ ಪೂರ್ವಸಿದ್ಧತೆಯನ್ನು ಶಿವಕುಮಾರ್ ಪರಿಶೀಲಿಸಿದರು.
ಮೆಟ್ರೋ 3ನೇ ಹಂತದ ಹಳದಿ ಮಾರ್ಗವು ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರದವರೆಗೆ ಸುಮಾರು 19.15 ಕಿಲೋ ಮೀಟರ್ ಉದ್ದವಿದ್ದು, 16 ನಿಲ್ದಾಣಗಳಿವೆ.
ಹಳದಿ ಮಾರ್ಗ ಮೆಟ್ರೋ ಸಂಚಾರದಿಂದ ಸುಮಾರು 8 ಲಕ್ಷ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಸಿಲ್ಕ್ ಬೋರ್ಡ್ ಸೇರಿದಂತೆ ಹಲವಾರು ಭಾಗದಲ್ಲಿ ಸಂಚಾರ ದಟ್ಟಣೆಗೆ ಪರಿಹಾರವಾಗಲಿದೆ ಎಂದು ಡಿಸಿಎಂ ಶಿವಕುಮಾರ್ ಅಭಿಪ್ರಾಯಪಟ್ಟರು.

