ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಿಬಿಎಂಪಿಯ ವಿಶೇಷ ಘಟಕ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ/ಪಂಗಡಗಳ ನಿವೇಶನರಹಿತ ಪೌರ ಕಾರ್ಮಿಕರಿಗೆ ನಿವೇಶನ ಹಂಚಿಕೆ ಕುರಿತು ಮಹತ್ವದ ಚರ್ಚೆ ನಡೆಯಿತು ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.
ಬೆಂಗಳೂರಿನ ವಿಧಾನಸೌಧದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳೊಂದಿಗೆ ಉಪಮುಖ್ಯಮಂತ್ರಿಗಳು ಗಂಭೀರ ಚರ್ಚೆ ನಡೆಸಿದರು.

