ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಗರದೊಳಗೆ ಪ್ರವೇಶಿಸಲು ಬೆಂಗಳೂರು ಉತ್ತರ ಭಾಗದಿಂದ ಹೆಬ್ಬಾಳ ಮಾರ್ಗ ಪ್ರಮುಖ ಹೆಬ್ಬಾಗಿಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದರು.
ಈ ಭಾಗದಲ್ಲಿ ವಾಹನ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ಮೇಲ್ಸೇತುವೆ ಕಾಮಗಾರಿ ಭರದಿಂದ ಸಾಗುತ್ತಿದೆ ಎಂದು ಡಿಸಿಎಂ ಹೇಳಿದರು.
ಕಾಮಗಾರಿ ಸ್ಥಳಕ್ಕೆ ಪಾಲಿಕೆ ಅಧಿಕಾರಿಗಳು ಹಾಗೂ ಎಂಜಿನಿಯರ್‌ಗಳೊಂದಿಗೆ ಭೇಟಿ ನೀಡಿ ಪ್ರಗತಿ ಪರಿಶೀಲಿಸಿದ್ದು, ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಸೂಚನೆ ನೀಡಿದರು.