ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಗೋವಿಂದರಾಜನಗರದ ಪರಮಪೂಜ್ಯ ಡಾ.ಬಾಲಗಂಗಾಧರನಾಥ ಸ್ವಾಮೀಜಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ಆಶಾಕಿರಣ ದೃಷ್ಟಿ ಕೇಂದ್ರವನ್ನು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಉದ್ಘಾಟಿಸಿ ದೃಷ್ಟಿದೋಷ ಇರುವವರಿಗೆ ಉಚಿತ ಕನ್ನಡಕ ವಿತರಿಸಿದರು.
ಇಂದಿನಿಂದ ರಾಜ್ಯದ 393 ಕಡೆಗಳಲ್ಲಿ ಈ ಕೇಂದ್ರಗಳು ಕಾರ್ಯನಿರ್ವಹಿಸಲಿದ್ದು, ಪರಿಣಾಮಕಾರಿಯಾಗಿ ಕಣ್ಣಿನ ಆರೋಗ್ಯ ಸೇವೆ ಒದಗಿಸಲಿವೆ ಎಂದು ಡಿಸಿಎಂ ಶಿವಕುಮಾರ್ ಹೇಳಿದರು.