ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭದ್ರಾ ಮೇಲ್ದಂಡೆ ಯೋಜನೆಯ ಪ್ರಗತಿ ವಿಚಾರವಾಗಿ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಲಸಂಪನ್ಮೂಲ ಸಚಿವರು, ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಯ
ಚಿತ್ರದುರ್ಗ ಶಾಖಾ ಕಾಲುವೆ ಮತ್ತು ತುಮಕೂರು ಶಾಖಾ ಕಾಲುವೆ ಕಾಮಗಾರಿಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಭೂಸ್ವಾಧೀನ ಸಮಸ್ಯೆ ನಿವಾರಿಸುವ ಕುರಿತು ಶಾಸಕರು, ಅಧಿಕಾರಿಗಳು ಹಾಗೂ ಸಂತ್ರಸ್ತ ರೈತರೊಂದಿಗೆ ವಿಧಾನಸೌಧದಲ್ಲಿ ಸಭೆ ನಡೆಸಲಾಯಿತು.
ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್, ದೆಹಲಿಯ ರಾಜ್ಯ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

