ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶೇಷಾದ್ರಿಪುರಂ ಸಹಾಯಕ ಪೊಲೀಸ್ ಆಯುಕ್ತರ ಕಚೇರಿ, ಹೈಗ್ರೌಂಡ್ಸ್ ಕಾನೂನು ಮತ್ತು ಸುವ್ಯವಸ್ಥೆ ಪೊಲೀಸ್ ಠಾಣೆ ಹಾಗೂ ಹೈಗ್ರೌಂಡ್ಸ್ ಸಂಚಾರ ಪೊಲೀಸ್ ಠಾಣೆಯ ನೂತನ ಕಟ್ಟಡಗಳನ್ನು ಮತ್ತು ಪುಲಕೇಶಿನಗರದ ನೂತನ ಪೊಲೀಸ್ ವಸತಿ ಗೃಹಗಳನ್ನು ಮುಖ್ಯಮಂತ್ರಿಗಳು ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಉದ್ಘಾಟಿಸಿದರು.
ಈ ವೇಳೆ ವೇದಿಕೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಶಿವಕುಮಾರ್, ಇಡೀ ದೇಶದಲ್ಲಿ ಕರ್ನಾಟಕದ ಪೊಲೀಸರಿಗೆ ಹೆಚ್ಚು ಗೌರವವಿದೆ. ಜನರು ನೆಮ್ಮದಿಯಾಗಿ ಇರಬೇಕಾದರೆ ಇದಕ್ಕೆ ಪೊಲೀಸ್ ಇಲಾಖೆಯೇ ಮುಖ್ಯ ಕಾರಣ ಎಂದು ತಿಳಿಸಿದರು.
ನಿರಂತರವಾಗಿ ತಮ್ಮನ್ನು ತಾವು ಕರ್ತವ್ಯದಲ್ಲಿ ತೊಡಗಿಸಿಕೊಂಡು ಸಮಾಜ ಹಾಗೂ ನಮ್ಮನ್ನು ರಕ್ಷಣೆ ಮಾಡುವುದರಲ್ಲಿ ಪೊಲೀಸರ ಪಾತ್ರ ಮಹತ್ವದ್ದಾಗಿದೆ. ರಾಜ್ಯದಲ್ಲಿನ ಪೊಲೀಸ್ ಅಧಿಕಾರಿಗಳ ಕರ್ತವ್ಯ ನಿಷ್ಠೆ ನಿಜಕ್ಕೂ ಶ್ಲಾಘನೀಯ ಎಂದು ಡಿ.ಕೆ ಶಿವಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದರು.