ಡಿಸಿಎಂ ಡಿಕೆ ಶಿವಕುಮಾರ್ ಜಿಲ್ಲಾ ಪ್ರವಾಸ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿಗಳು ಮತ್ತು ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು 2025ನೇ ಮೇ 16 ರಂದು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ರಾಜ್ಯ ಸರ್ಕಾರವು 2 ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಸಾಧನಾ ಸಮಾವೇಶ ಕಾರ್ಯಕ್ರಮದ ಸ್ಥಳ ಪರಿಶೀಲನೆ ಮಾಡಿ ಅಂದೇ ಕೇಂದ್ರಸ್ಥಾನಕ್ಕೆ ಆಗಮಿಸಲಿರುವರು ಎಂದು ಉಪ ಮುಖ್ಯಮಂತ್ರಿಗಳ ಹೆಚ್ಚುವರಿ ಆಪ್ತ ಕಾರ್ಯದರ್ಶಿ ಬಿ.ಎಸ್. ಶ್ರೀಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

Share This Article
error: Content is protected !!
";