ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಮುದಾಯದ ಪ್ರಗತಿ ನಮ್ಮ ಆದ್ಯತೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸೆ.22 ರಿಂದ ಅಕ್ಟೋಬರ್-7ರ ವರೆಗೆ ರಾಜ್ಯಾದ್ಯಂತ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿರುವುದರಿಂದ ಶನಿವಾರ ಬೆಂಗಳೂರಿನ ವಿಜಯನಗರದಲ್ಲಿರುವ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖ ಮಠದಲ್ಲಿ ನಡೆದ ಒಕ್ಕಲಿಗ ಸಮುದಾಯದ ಜಾಗೃತಿ ಸಭೆಯಲ್ಲಿ ಆದಿಚುಂಚನಗಿರಿ ಮಠದ ಪೀಠಾಧಿಪತಿಗಳಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ,
ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಂಜಾವಧೂತ ಸ್ವಾಮೀಜಿ, ಕೆಂಗೇರಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ.ನಿಶ್ಚಲಾನಂದನಾಥ ಸ್ವಾಮೀಜಿ ಅವರು ಹಾಗೂ ಸಮುದಾಯದ ನಾಯಕರೊಂದಿಗೆ ಪಾಲ್ಗೊಂಡು, ಜಾತಿಗಣತಿಗೆ ಸಂಬಂಧಿಸಿದಂತೆ ಚರ್ಚಿಸಲಾಯಿತು ಎಂದು ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

