ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಿಂಗಾಪುರದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ವ್ಯಾಪಾರ ಮತ್ತು ಕೈಗಾರಿಕಾ ಸಚಿವಾಲಯದ ರಾಜ್ಯ ಸಚಿವೆ ಶ್ರೀಮತಿ ಗ್ಯಾನ್ ಸಿಯೋ ಹುವಾಂಗ್ ಅವರನ್ನು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ ಮಾಡಿ ಚರ್ಚಿಸಿದರು.
ಕರ್ನಾಟಕ ಮತ್ತು ಸಿಂಗಾಪುರ ನಡುವಿನ ವ್ಯಾಪಾರ, ನಾವೀನ್ಯತೆ ಮತ್ತು ಕೌಶಲ್ಯ ಅಭಿವೃದ್ಧಿಯಲ್ಲಿ ಪಾಲುದಾರಿಕೆಯನ್ನು ಗಾಢಗೊಳಿಸುವ ಅವಕಾಶಗಳ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಸಿಂಗಾಪುರದ ಸಚಿವರು ಮಹತ್ವದ ಚರ್ಚೆ ಮಾಡಿದರು.

