ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷ ಎಲ್.ಶ್ರೀನಿವಾಸ್ ಅವರು ಹಾಗೂ ನೂತನ ಪದಾಧಿಕಾರಿಗಳು ಬುಧವಾರ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಅವರ ಗೃಹಕಚೇರಿಯಲ್ಲಿ ಭೇಟಿ ಮಾಡಿ ಚರ್ಚಿಸಿದರು.
ಈ ವೇಳೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮಾತನಾಡಿ ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಸಮುದಾಯದ ಅಭಿವೃದ್ಧಿಗೆ ಸಂಘದ ಪದಾಧಿಕಾರಿಗಳು ಪ್ರಮಾಣಿಕವಾಗಿ ಶ್ರಮಿಸುವಂತೆ ಸೂಚಿಸಿದರಲ್ಲದೆ ನೂತನ ಸದಸ್ಯರಿಗೆ ಡಿಸಿಎಂ ಶಿವಕುಮಾರ್ ಅವರು ಶುಭ ಹಾರೈಸಿದರು.

