ಸಂಸ್ಕರಿಸಿದ ತ್ಯಾಜ್ಯ ನೀರಿನಿಂದ 126 ಕೆರೆಗಳಿಗೆ ಭರ್ತಿ-ಡಿಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜಿಲ್ಲಾಡಳಿತ ಹಾಗೂ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಬೆಂಗಳೂರು ನಗರದ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಕೋಲಾರ ಜಿಲ್ಲೆಯ ಹಾಗೂ

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ 126 ಕೆರೆಗಳನ್ನು ತುಂಬಿಸುವ ಏತ ನೀರಾವರಿ ಯೋಜನೆ ಕಾಮಗಾರಿಯ ಎರಡನೇ ಹಂತದಲ್ಲಿ 272 ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವತಿ ಯೋಜನೆಯ ಕಾಮಗಾರಿಗೆ ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್‌ಮುಖಾಂತರ ಉದ್ಘಾಟನೆ ನೆರವೇರಿಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದರು.

- Advertisement - 

ಕೆರೆಗಳಿಗೆ ನೀರು ತುಂಬಿಸುವ ಈ ಯೋಜನೆಯಿಂದ ಬಯಲು ಸೀಮೆಯ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಕೃಷಿ ಚಟುವಟಿಕೆಗಳ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಶಿವಕುಮಾರ್ ಹೇಳಿದರು.

 

- Advertisement - 

 

 

Share This Article
error: Content is protected !!
";