ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿದ ಡಿಸಿಎಂ, ಸಚಿವರುಗಳು

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಗಣರಾಜ್ಯೋತ್ಸವದ ಸಂಭ್ರಮದ ಅಂಗವಾಗಿ ಲಾಲ್‌ಬಾಗ್‌ನಲ್ಲಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಲಾಯಿತು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಹಾಗೂ ಶಾಸಕರಾದ ಉದಯ್ ಗರುಡಾಚಾರ್ ಅವರೊಂದಿಗೆ ಈ ಸುಂದರ ಕಾರ್ಯಕ್ರಮವನ್ನು ಸಾರಿಗೆ ಸಚಿವ ಆರ್.ರಾಮಲಿಂಗಾರೆಡ್ಡಿ ಅವರು ಉದ್ಘಾಟಿಸಿದರು.

ಈ ಬಾರಿಯ ಪ್ರದರ್ಶನವು ಖ್ಯಾತ ಸಾಹಿತಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಜೀವನ ಮತ್ತು ಕೃತಿಗಳ “ತೇಜಸ್ವಿ ವಿಸ್ಮಯ” ಥೀಮ್ ಅಡಿಯಲ್ಲಿ ಮೂಡಿಬಂದಿದೆ.

- Advertisement - 

ಕರ್ವಾಲೋ ಕಾದಂಬರಿಯ ಕಾಲ್ಪನಿಕ ಚಿತ್ರಣ, ಬಿಳಿಗಿರಿ ರಂಗನ ಬೆಟ್ಟದ ಹಳ್ಳಿ ಸೊಗಡು ಹಾಗೂ ನಂದಿಗಿರಿಧಾಮದಂತಹ ಅದ್ಭುತ ಕಲಾಕೃತಿಗಳು ಪ್ರಕೃತಿ ಪ್ರೇಮಿಗಳ ಮನಗೆಲ್ಲಲಿವೆ.

ಇಂದಿನಿಂದ ಜನವರಿ 26 ರವರೆಗೆ ನಡೆಯಲಿರುವ ಈ ಫಲಪುಷ್ಪ ಪ್ರದರ್ಶನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿ, ಪ್ರಕೃತಿಯ ಈ ವಿಸ್ಮಯ ಕಣ್ತುಂಬಿಕೊಳ್ಳಿ ಎಂದು ಸಚಿವರು ಕರೆ ನೀಡಿದರು.

- Advertisement - 

ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ, ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ ಅವರು ಸೇರಿದಂತೆ ಅನೇಕ ಮುಖಂಡರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

 

Share This Article
error: Content is protected !!
";