ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಗರದಾದ್ಯಂತ ವಿವಿಧ ಕಾಮಗಾರಿಗಳಿಗೆ ಸೋಮವಾರ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಚಾಲನೆ ನೀಡಿದರು.
ಕಾಮಗಾರಿಗಳ ಚಾಲನೆಗೂ ಮುನ್ನ ಸಂವಿಧಾನ ಶಿಲ್ಪಿಗೆ ನಮಿಸಿ ಇಂದಿನ ದಿನವನ್ನು ಆರಂಭಿಸೋಣ ಎಂದು, ಟ್ಯಾನರಿ ರಸ್ತೆಯ ಪೆರಿಯಾರ್ ಸರ್ಕಲ್ ನಲ್ಲಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಗೌರವ ಸಲ್ಲಿಸಿದರು.
ವಿವಿಧ ಇಲಾಖೆಗಳ ಅಧಿಕಾರಿಗಳು, ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಇದ್ದರು.