ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಸುಮನಹಳ್ಳಿಯ 5 ಎಕರೆ ಜಾಗದಲ್ಲಿ, ಜೂನ್ 27ರಂದು ಕೆಂಪೇಗೌಡ ಜಯಂತಿಯ ದಿನ ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಕೆಂಪೇಗೌಡ ಭವನಕ್ಕೆ ಶಂಕುಸ್ಥಾಪನೆ ನೆರವೇರಲಿದೆ.
ಇದಕ್ಕೆ ಸಂಬಂಧಿಸಿದಂತೆ ಸ್ಥಳ ಪರಿಶೀಲನೆಯನ್ನು ನಡೆಸಿದರು. ಬೆಂಗಳೂರಿನ ನಿರ್ಮಾತೃ ಕೆಂಪೇಗೌಡರಿಗೆ ಗೌರವ ಸಲ್ಲಿಸಲು ನಾವೆಲ್ಲರೂ ಒಂದಾಗೋಣ ಎಂದು ಡಿಸಿಎಂ ಕರೆ ನೀಡಿದರು.