ಊಟಕ್ಕೆ ಸೇರಿದರೆ ರಾಜಕೀಯ ಯಾಕೆ ಬೇರೆಸುತ್ತೀರಿ?-ಡಿಸಿಎಂ

News Desk

ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿದೇಶ ಪ್ರವಾಸ ಮುಗಿಸಿಕೊಂಡು ಭಾರತಕ್ಕೆ ಬಂದಿಳಿದಿದ್ದು
, ಸಚಿವ ಸತೀಶ್ ಜಾರಕಿಹೊಳಿ ಮನೆಯಲ್ಲಿ ಡಿನ್ನರ್​ ಮೀಟಿಂಗ್​ ಮಾಡಿರುವ ಕುರಿತು ಡಿಸಿಎಂ ಪ್ರತಿಕ್ರಿಯಿಸಿದ್ದಾರೆ.

ಮಾಧ್ಯಮಗಳೊಂದಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿ, ಸಚಿವರ ಮನೆಯಲ್ಲಿ ಔತಣ ಕೂಟಕ್ಕೆ ಸೇರಿದರೆ ರಾಜಕೀಯ ಯಾಕೆ ಬೇರೆಸುತ್ತೀರಿ? ಎಲ್ಲರೂ ಊಟಕ್ಕೆ ಸೇರಿದರೆ ಅದರಲ್ಲಿ ತಪ್ಪೇನಿದೆ ಎಂದು ಮಾಧ್ಯಮದರನ್ನೇ ಪ್ರಶ್ನಿಸಿದ್ದಾರೆ.

ನಾಲ್ಕು ವರ್ಷದಿಂದ ಎಲ್ಲೂ ಹೊರಗೆ ಹೋಗಿರಲಿಲ್ಲ. ಹೀಗಾಗಿ ಕುಟುಂಬದ ಜೊತೆಗೆ ಹೊಸ ವರ್ಷಕ್ಕೆ ವಿದೇಶಕ್ಕೆ ತೆರಳಿದ್ದೆ. ಔತಣಕೂಟಕ್ಕೆ ಸೇರಿದ್ದನ್ನೂ ರಾಜಕೀಯ ಯಾಕೆ ಬೆರೆಸುತ್ತೀರಿ. ಎಲ್ಲರೂ ಊಟಕ್ಕೆ ಸೇರಿದರೆ ತಪ್ಪೇನು? ನಾನು ಕೆಲವು ಬಾರಿ ಊಟಕ್ಕೆ ಕರೆದಿದ್ದೇನೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಕ್ಯಾಬಿನೆಟ್ ಪುನರ್ ರಚನೆ ನಿಮ್ಮನ್ನು ಬ್ಯುಸಿಯಲ್ಲಿಡಲು ದಾರಿ ತಪ್ಪಿಸುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ತೀಕ್ಷ್ಣವಾಗಿ ತಿಳಿಸಿದರು.

ಸತೀಶ್‌ಜಾರಕಿಹೊಳಿ ನಿವಾಸದಲ್ಲಿ ಜ.2ರ ರಾತ್ರಿ ನಡೆದ ಔತಣ ಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ ಕೆಲವು ಸಚಿವರು ಮತ್ತು ಶಾಸಕರು ಪಾಲ್ಗೊಂಡಿದ್ದರು. ಸಂಪುಟ ಸಭೆಯ ಬಳಿಕ ಸಚಿವರ ಅಧಿಕೃತ ನಿವಾಸದಲ್ಲಿ ಔತಣಕೂಟ ಆಯೋಜಿಸಲಾಗಿತ್ತು.

ಕೆಪಿಸಿಸಿ ಅಧ್ಯಕ್ಷರ ಸ್ಥಾನದ ಬದಲಾವಣೆ ಹಾಗೂ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಚರ್ಚೆ ನಡುವೆಯೇ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿದೇಶ ಪ್ರವಾಸದಲ್ಲಿರುವಾಗಲೇ ಸಭೆ ನಡೆದಿರುವುದು ಕುತೂಹಲ ಮೂಡಿಸಿತ್ತು. ಸಭೆಯಲ್ಲಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಿರುವುದು ಮತ್ತಷ್ಟು ಮಹತ್ವ ಪಡೆದುಕೊಂಡಿತ್ತು.

ಡಾ.ಜಿ.ಪರಮೇಶ್ವರ್, ಕೆ.ಎನ್. ರಾಜಣ್ಣ, ಡಾ.ಎಚ್.ಸಿ. ಮಹದೇವಪ್ಪ ಸೇರಿ ಏಳು ಮಂದಿ ಸಚಿವರು ಹಾಜರಿದ್ದರು. ಜತೆಗೆ ಒಟ್ಟು 35 ಮಂದಿ ಶಾಸಕರೂ ಭಾಗವಹಿಸಿದ್ದು ದೊಡ್ಡ ಸುದ್ದಿ ಆಗಿತ್ತು.

 

- Advertisement -  - Advertisement - 
Share This Article
error: Content is protected !!
";