ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಗದಗದಲ್ಲಿ ನಡೆದ ರಾಜ್ಯ ಮಟ್ಟದ ಪ್ರಾಚ್ಯ ಪ್ರಜ್ಞೆ ರಸ ಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಗೊಲ್ಲರಹಟ್ಟಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯರಾದ ತನುಜ ಹಾಗೂ ವಸುಂಧರ ಪ್ರಥಮ ಸ್ಥಾನ ಪಡೆದು ಚಿತ್ರದುರ್ಗ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿಯರಿಗೆ ಹಾಗೂ ಮಾರ್ಗದರ್ಶನ ಮಾಡಿದ ಶಿಕ್ಷಕ ಮಲ್ಲಿಕಾರ್ಜುನ ಇವರುಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್ ತಮ್ಮ ಕಚೇರಿಯಲ್ಲಿ ಅಭಿನಂದಿಸಿದರು.
ಜಿಲ್ಲಾ ನೋಡಲ್ ಅಧಿಕಾರಿ ಪ್ರಶಾಂತ್ ಕೆ. ವಿಷಯ ಪರಿವೀಕ್ಷಕ ನಿತ್ಯಾನಂದ ರಂಗನಾಯ್ಕ, ಸಿ.ಲೀಲಾವತಿ ಇವರುಗಳು ಈ ಸಂದರ್ಭದಲ್ಲಿದ್ದರು.

