ವಿಜ್ಞಾನ ಮತ್ತು ಇಂಜಿನಿಯರಿಂಗ್‍ನಲ್ಲಿ ಪಿ.ಹೆಚ್‍ಡಿ ಸಂಶೋಧನೆ, ಕರ್ನಾಟಕ ಡಿಎಸ್ ಟಿ-ಪಿ.ಹೆಚ್.ಡಿ ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು (ಡಿ.ಎಸ್.ಟಿ) ವಿಜ್ಞಾನ ಮತ್ತು ಇಂಜಿನಿಯರಿಂಗ್ನಲ್ಲಿ ಪಿ.ಹೆಚ್.ಡಿ ಸಂಶೋಧನೆಗೆ ಕರ್ನಾಟಕ ಡಿ.ಎಸ್.ಟಿಪಿ.ಹೆಚ್.ಡಿ. ಶಿಷ್ಯವೇತನ ಎಂಬ ಕಾರ್ಯಕ್ರಮವನ್ನು ಇಲಾಖೆಯ ಸ್ವಾಯತ್ತ ಸಂಸ್ಥೆಯಾದ ಕರ್ನಾಟಕ ವಿಜ್ಞಾನ ಮತ್ತು ತತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯ ಮುಖಾಂತರ ಅನುಷ್ಠಾನಗೊಳಿಸುತ್ತಿದೆ.

 2024 – 25ನೇ ಸಾಲಿನಲ್ಲಿ ಸದರಿ ಯೋಜನೆಯಡಿ ಶಿಷ್ಯವೇತನ ಪಡೆಯಲು ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯಗಳಲ್ಲಿ ಕರ್ನಾಟಕದಲ್ಲಿರುವ ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಸಂಸ್ಥೆ/ ಕಾಲೇಜುಗಳಲ್ಲಿ ಈಗಾಗಲೇ ಪಿ.ಹೆಚ್.ಡಿ ಪದವಿಗೆ ನೋಂದಾಯಿತರಾಗಿರುವ ಅರ್ಹ ಸಂಶೋಧನಾ ವಿದ್ಯಾರ್ಧಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿ ದಿನಾಂಕ: 30-08-2024ರಂದು ಅಧಿಸೂಚನೆ ಹೊರಡಿಸಲಾಗಿದೆ. 

ಅನ್ಲೈನ್ ಮೂಲಕ ಅರ್ಜಿಗಳನ್ನು ಅಕ್ಟೋಬರ್ 05, ಸಂಜೆ 5.30 ಗಂಟೆ ವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.
ಹೆಚ್ಚಿನ ವಿವರಗಳಿಗಾಗಿ ಮತ್ತು ಅರ್ಜಿ ಸಲ್ಲಿಸಲು http://ksteps.karnataka.gov.in   ಜಾಲತಾಣಕ್ಕೆ ಭೇಟಿ ನೀಡಬಹುದು ಎಂದು ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 

- Advertisement -  - Advertisement -  - Advertisement - 
Share This Article
error: Content is protected !!
";