ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
“ಕಾಂಗ್ರೆಸ್‌ಗ್ಯಾರಂಟಿಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ” ಎಂಬ ಸತ್ಯವನ್ನು ಸಿದ್ದರಾಮಯ್ಯ ಅವರ ಮಾನಸಪುತ್ರ ಕಾಂಗ್ರೆಸ್‌ಶಾಸಕ ರಾಘವೇಂದ್ರ ಹಿಟ್ನಾಳ್‌ಬಹಿರಂಗವಾಗಿ ಹೊರಹಾಕಿದ್ದಾರೆ ಎಂದು ಜೆಡಿಎಸ್ ತಿಳಿಸಿದೆ.
ಕರ್ನಾಟಕ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಹಳ್ಳ ಹಿಡಿದಿದೆ. ಸ್ವಪಕ್ಷೀಯರೇ ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿ ಆಕ್ರೋಶ ವ್ಯಕ್ತಪಡಿಸುತ್ತಿರುವುದು ಸಿದ್ದರಾಮಯ್ಯ ಸರ್ಕಾರದ ಆರ್ಥಿಕ ತುರ್ತು ಪರಿಸ್ಥಿತಿ ಹಳಿ ತಪ್ಪಿರುವುದಕ್ಕೆ ಸೂಕ್ತ ನಿದರ್ಶನವಾಗಿದೆ ಎಂದು ಜೆಡಿಎಸ್ ಟೀಕಿಸಿದೆ.