ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ಮಸೂದೆ ಪಾಸ್

WhatsApp
Telegram
Facebook
Twitter
LinkedIn

ಚಂದ್ರವಳ್ಳಿ ನ್ಯೂಸ್, ಕೋಲ್ಕತ್ತಾ (ಪಶ್ಚಿಮ ಬಂಗಾಳ):
ಬಂಗಾಳದ ವೈದ್ಯೆ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ
, ಹತ್ಯೆ ಪ್ರಕರಣದಿಂದ ಎಚ್ಚತ್ತ  ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸರ್ಕಾರ, ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸುವಂತ ಮಸೂದೆ ಮಂಡಿಸಿ ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ಮಂಗಳವಾರ ಅಂಗೀಕಾರ ಪಡೆದುಕೊಂಡಿದ್ದಾರೆ.

 ಅಪರಾಜಿತ ಮಹಿಳೆ ಮತ್ತು ಮಕ್ಕಳ ಮಸೂದೆ-2024ಕ್ಕೆ ಸರ್ವಾನುಮತದಿಂದ ಒಪ್ಪಿಗೆ ಸಿಕ್ಕಿದೆ. ರಾಜ್ಯಪಾಲರ ಸಹಿ ಬಳಿಕ ಇದು ಕಾನೂನಾಗಿ ಜಾರಿಯಾಗಲಿದೆ. ರಾಜ್ಯದಲ್ಲಿ ಮಹಿಳೆಯರ ಮೇಲೆ ನಡೆಯುವ ಅತ್ಯಾಚಾರ ಪ್ರಕರಣಗಳ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಕಠಿಣ ಕ್ರಮವನ್ನು ಮಸೂದೆಯಲ್ಲಿ ನಮೂದಿಸಲಾಗಿದೆ. ವಿಪಕ್ಷ ಬಿಜೆಪಿ ಸೂಚಿಸಿದ ಕೆಲ ತಿದ್ದುಪಡಿಗಳನ್ನು ಸರ್ಕಾರ ಪರಿಗಣಿಸಿಲ್ಲ.

ಮಸೂದೆಯಲ್ಲಿ ಏನಿದೆ-
ಅತ್ಯಾಚಾರ ಮತ್ತು ಸಾಮೂಹಿಕ ಅತ್ಯಾಚಾರ ಎಸಗಿದ್ದು ದೃಢಪಟ್ಟರೆ, ಜೀವಾವಧಿ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಅತ್ಯಾಚಾರ ಸಾಬೀತಾದಲ್ಲಿ ಅಪರಾಧಿಗೆ ಗರಿಷ್ಠ ಶಿಕ್ಷೆಯಾಗಿ ಗಲ್ಲಿಗೇರಿಸುವ ಪ್ರಸ್ತಾಪ ಇದರಲ್ಲಿದೆ. ಅತ್ಯಾಚಾರಿಗಳಿಗೆ ಜೈಲು ಶಿಕ್ಷೆ ವಿಧಿಸಿದ ಬಳಿಕ ಪೆರೋಲ್​ರಹಿತ ಸೆರೆವಾಸ ಅನುಭವಿಸಬೇಕು ಎನ್ನುವ ಮಹತ್ವದ ಅಂಶಗಳನ್ನು ಮಸೂದೆಯಲ್ಲಿ ಸೇರಿಸಲಾಗಿದೆ.

ಅತ್ಯಾಚಾರಕ್ಕೆ ಕಡಿವಾಣ:
ಮಂಗಳವಾರ ನಡೆದ ವಿಶೇಷ ಅಧಿವೇಶನದಲ್ಲಿ ಮಮತಾ ಬ್ಯಾನರ್ಜಿ
, ಮಸೂದೆಯ ಮೇಲೆ ಮಾತನಾಡಿ ಮಹಿಳೆಯರ ಘನತೆ ಕಾಪಾಡಲು ಮಸೂದೆ ತರಲಾಗುತ್ತಿದೆ. ದುಷ್ಕೃತ್ಯಗಳಿಗೆ ಕಡಿವಾಣ ಹಾಕಲು ಕಠಿಣ ಮಸೂದೆ ಜಾರಿಗೆ ತರಲಾಗುವುದು ಎಂದರು.

ರೈಲುಗಳಲ್ಲಿ ಅತ್ಯಾಚಾರ ಪ್ರಕರಣಗಳು ನಡೆಯುತ್ತಿವೆ ಎಂದು ಪ್ರತಿಪಕ್ಷಗಳು ಆರೋಪಿಸುತ್ತಿವೆ. ರೈಲಿನಲ್ಲಿ ಕೃತ್ಯ ನಡೆದಾಗ ಅದನ್ನು ತಡೆಯಬೇಕಾಗಿದ್ದು, ಆರ್‌ಪಿಎಫ್‌ಕೆಲಸ. ಉನ್ನಾವೋ ಮತ್ತು ಹತ್ರಾಸ್ ಪ್ರಕರಣದಲ್ಲಿ ಈ ವಿರೋಧ ಏಕೆ ಬರಲಿಲ್ಲ. ವಿಪಕ್ಷಗಳು ಈ ಕುರಿತು ಏಕೆ ಮಾತನಾಡುತ್ತಿಲ್ಲ ಎಂದು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು.

ದೇಶದ ಪ್ರತಿ ರಾಜ್ಯದಲ್ಲೂ ಇಂತಹ ಘಟನೆಗಳು ನಡೆಯುತ್ತಿವೆ. ದೇಶದಲ್ಲಿ ನಿತ್ಯ 90 ಅತ್ಯಾಚಾರ ಪ್ರಕರಣಗಳು ದಾಖಲಾಗುತ್ತಿವೆ. ಈ ಪೈಕಿ ಕೇವಲ ಶೇಕಡಾ 2.56 ರಷ್ಟು ಅಪರಾಧಿಗಳಿಗೆ ಮಾತ್ರ ಶಿಕ್ಷೆ ವಿಧಿಸಲಾಗುತ್ತಿದೆ ಎಂದು ಹೇಳಿದರು.

ಮಸೂದೆಗೆ ಬಿಜೆಪಿ ಬೆಂಬಲ:
ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಮಸೂದೆಗೆ ಬಿಜೆಪಿ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದೆ. ವಿಪಕ್ಷ ನಾಯಕ ಸುವೇಂದು ಅಧಿಕಾರಿ ಮಾತನಾಡಿ, ಈ ಕಾನೂನು ತಕ್ಷಣವೇ ಜಾರಿಗೆ ಬರಬೇಕು. ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆಯಾಗಬೇಕು. ಇದನ್ನು ತಕ್ಷಣಕ್ಕೆ ಅನುಷ್ಠಾನಕ್ಕೆ ತರುವುದು ಸರ್ಕಾರದ ಜವಾಬ್ದಾರಿಯಾಗಿದೆ. ಕಾನೂನು ಜಾರಿ ಮಾಡಿದ ಬಳಿಕ ಫಲಿತಾಂಶ ಬರಬೇಕು ಎಂದು ಸಲಹೆ ನೀಡಿದರು.

 

 

 

News Desk   About Us
For Feedback - [email protected]

LATEST Post

error: Content is protected !!
WhatsApp Icon Telegram Icon