ಚಂದ್ರವಳ್ಳಿ ನ್ಯೂಸ್, ಮಂಡ್ಯ:
ಮಂಗಳೂರಿನ ಸುಹಾಸ್ ಶೆಟ್ಟಿ ಹತ್ಯೆ ಯಾಕೆ ನಡೆದಿದೆ ಗೊತ್ತಿಲ್ಲ. ಹಂತಕರು ಯಾರೇ ಆಗಿದ್ದರೂ ಕೂಡಲೇ ಕ್ರಮ ಆಗಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಸುಹಾಸ್ ಶೆಟ್ಟಿ ಹತ್ಯೆ ಕುರಿತು ಮಂಡ್ಯದಲ್ಲಿ ಪ್ರತಿಕ್ರಿಯಿಸಿದ ಅವರು, ಯಾರೇ ಆದರೂ ಮನಷ್ಯರ ಪ್ರಾಣ ಮುಖ್ಯ. ಮೃತ ವ್ಯಕ್ತಿ ರೌಡಿಶೀಟರ್ ಅಂತ ಹೇಳುತ್ತಿದೆ. ಹಂತಕರು ಯಾರೇ ಆಗಿದ್ದರೂ ಕೂಡಲೇ ಕ್ರಮ ಆಗಬೇಕು. ಶೀಘ್ರ ಆರೋಪಿಗಳ ಪತ್ತೆಗೆ ಕ್ರಮವಹಿಸಬೇಕು. ಇಂತಹ ಘಟನೆಗಳಿಗಾಗಿಯೇ ಬಿಜೆಪಿಯವರು ಕಾಯುತ್ತಿರುತ್ತಾರೆ ಎಂದು ಸಿಎಂ ಗಂಭೀರ ಆರೋಪ ಮಾಡಿದರು.
ಪಹಲ್ಗಾಮ್ ನಲ್ಲಿ ಉಗ್ರರು ನಡೆಸಿದ ದಾಳಿ ವೇಳೆ 26 ಜನ ಮೃತಪಟ್ಟರು. ಪ್ರಧಾನಮಂತ್ರಿ ಪಹಲ್ಗಾಮ್‌ಗೆ ಹೋಗಿದ್ದಾರ?. ಆ ಘಟನೆಗೆ ಭದ್ರತಾ ವೈಫಲ್ಯ ಕಾರಣ ಅಲ್ಲವಾ?. ನೂರಾರು ಪ್ರವಾಸಿಗರು ಹೋಗುವ ಜಾಗದಲ್ಲಿ ಪೊಲೀಸರು ಇಲ್ಲ, ಸೆಕ್ಯೂರಿಟಿ ಕೂಡ ಇಲ್ಲ ಎಂದು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.
ಈ ವೇಳೆ ಪುತ್ರ ಯತೀಂದ್ರ, ಸಚಿವ ಎನ್.ಚಲುವರಾಯಸ್ವಾಮಿ, ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಸಾಥ್ ನೀಡಿದರು.
ಶಾಸಕ ರಮೇಶ್ ಬಂಡಿಸಿದ್ದೇಗೌಡ, ಜಿಲ್ಲಾಡಳಿತ, ಸ್ಥಳೀಯ ಮುಖಂಡರು ಅದ್ಧೂರಿ ಸ್ವಾಗತ ನೀಡಿದರು.
ಅಲ್ಲಿಂದ ಅಲ್ಲಾಪಟ್ಟಣದಲ್ಲಿರುವ ಮೂಲ ಮನೆ ದೇವರಾದ ಅನ್ನದಾನೇಶ್ವರ ದೇಗುಲದ ಉದ್ಘಾಟನಾ ಸಮಾರಂಭಕ್ಕೆ ಸಿಎಂ ತೆರಳಿದರು.