ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ಆಹಾರ ಹರಸಿ ಬಂದ ಜಿಂಕೆ ರಸ್ತೆ ದಾಟುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾಗಿದ್ದು ಅಪಘಾತದಿಂದ ಜಿಂಕೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ-ನೆಲಮಂಗಲ ರಸ್ತೆಯ ಆಕಾಶವಾಣಿ ಕೇಂದ್ರದ ಬಳಿ ನಡೆದಿದೆ.
ಶುಕ್ರವಾರ ತಡ ರಾತ್ರಿ ಜಿಂಕೆಯೊಂದು ರಸ್ತೆ ದಾಟುವ ವೇಳೆ ಅಪರಿಚಿತ ವಾಹನ ಡಿಕ್ಕಿಹೊಡೆದ ಪರಿಣಾಮ ಸುಮಾರು 6 ವರ್ಷದ ಗಂಡು ಜಿಂಕೆ ಸ್ಥಳದಲ್ಲೇ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ.
ಇಂದು ಬೆಳಿಗ್ಗೆ ಜಿಂಕೆ ರಸ್ತೆಯಲ್ಲಿ ಸತ್ತು ಬಿದ್ದುರುವುದನ್ನುಕಂಡ ನಾಗರೀಕರು, ತಕ್ಷಣ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದರು.
“ಮೇಲ್ನೋಟಕ್ಕೆ ವಾಹನ ಡಿಕ್ಕಿ ಒಡೆದು ಸಾವನ್ನಪ್ಪಿರಬಹುದು. ಅದರೆ ಮರಣೋತ್ತರ ಪರೀಕ್ಷೆಯ ನಂತರ ಪೂರ್ಣ ಮಾಹಿತಿ ತಳಿಯುತ್ತೆ”. ಕೃಷ್ಣೇಗೌಡ ವಲಯ ಅರಣ್ಯಾಧಿಕಾರಿ, ದೊಡ್ಡಬಳ್ಳಾಪುರ.