ರೈತರ, ದಲಿತರ, ಮಠಗಳ ಆಸ್ತಿ ವಕ್ಫ್ ಗೆ, ಸರ್ಕಾರಕ್ಕೆ ಧಿಕ್ಕಾರ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನೆಲದ ಮಣ್ಣಿನ ಮಕ್ಕಳ ಭೂಮಿಯ ಹಕ್ಕು ಕಸಿಯುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಭಾರತೀಯ ಕಿಸಾನ್ ಸಂಘ ಆಯೋಜಿಸಿದ್ದ ರೈತರ, ದಲಿತರ, ಶೋಷಿತರ, ಮಠ- ಮಂದಿರಗಳ ಜಮೀನುಗಳನ್ನು ಅಕ್ರಮವಾಗಿ ಕಬಳಿಸಲು ವಕ್ಫ್‌ಬೋರ್ಡ್‌ಹೆಸರಿನಲ್ಲಿ ಷಡ್ಯಂತ್ರ ರೂಪಿಸಿರುವ ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧದ ಬೃಹತ್ ರೈತ ಘರ್ಜನೆ ರ‍್ಯಾಲಿಯಲ್ಲಿಭಾಗವಹಿಸಿ ಅವರು ಮಾತನಾಡಿದರು.

ನಾಡಿನ ಅನ್ನದಾತರಿಗೆ ಸಂಕಟ ತಂದೊಡ್ಡಿರುವ ವಕ್ಫ್ ಕಾಯ್ದೆ ರದ್ದುಗೊಳಿಸಿ ರಾಜ್ಯಾದ್ಯಂತ ಗೊಂದಲ ಸೃಷ್ಟಿಗೆ ಕಾರಣವಾಗಿರುವ ಸಚಿವ ಜಮೀರ್ ಅಹಮದ್ ಅವರನ್ನು ಈ ಕೂಡಲೇ ವಜಾಗೊಳಿಸಬೇಕೆಂದು ರಾಜ್ಯ ಸರ್ಕಾರವನ್ನು ಆಗ್ರಹಿಸಲಾಯಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ, ಭಾರತೀಯ ಕಿಸಾನ್ ಸಂಘದ ದಕ್ಷಿಣ ಪ್ರಾಂತ್ಯದ ಉಪಾಧ್ಯಕ್ಷ ಎಚ್.ಪಿ.ನಾರಾಯಣರೆಡ್ಡಿ, ಬೆಂಗಳೂರು ದಕ್ಷಿಣ ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಶಾಸಕರಾದ ಸಿ.ಕೆ ರಾಮಮೂರ್ತಿ, ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್, ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ವಿವಿಧ ಮಠಮಾನ್ಯಗಳ ಪರಮಪೂಜ್ಯ ಶ್ರೀಗಳು, ಕಿಸಾನ್ ಸಂಘದ ಪ್ರಮುಖರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ರೈತಬಂಧುಗಳು ಉಪಸ್ಥಿತರಿದ್ದರು.

- Advertisement -  - Advertisement -  - Advertisement - 
Share This Article
error: Content is protected !!
";