ದೆಹಲಿ ಸ್ಫೋಟ, ಬಿಹಾರ ಚುನಾವಣೆ ಮೇಲೆ ಬಿಜೆಪಿ ವಿರುದ್ಧ ಪರಿಣಾಮ-ಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಮೈಸೂರು:
ದೆಹಲಿಯಲ್ಲಿ ಸೋಮವಾರ ನಡೆದ ಕಾರ್ ಸ್ಫೋಟದಿಂದಾಗಿ ಬಿಹಾರ ಚುನಾವಣೆ ಮೇಲೆ ಪರಿಣಾಮ ಬೀರಬಹುದು. ಅದೂ ಕೂಡ ಬಿಜೆಪಿ ವಿರುದ್ಧವಾಗಿ ಪರಿಣಾಮ ಬೀರಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಮೈಸೂರಿನ ತಮ್ಮ ನಿವಾಸದಲ್ಲಿ ಮಂಗಳವಾರ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಮಾಧ್ಯಮದವರು ದೆಹಲಿ ಸ್ಫೋಟ ಇವತ್ತಿನ ಬಿಹಾರ ಚುನಾವಣೆ ಮೇಲೆ ಪ್ರಭಾವ ಬೀರುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ ಅವರು, ಕೇಂದ್ರ ಸರ್ಕಾರದ ಭದ್ರತಾ ವೈಫಲ್ಯ ಆಗಿದೆ. ಕೇಂದ್ರವೇ ತನಿಖೆ ನಡೆಸಿ ಉತ್ತರಿಸಲಿ‌. ಬಾಂಬ್ ಬ್ಲಾಸ್ಟ್​ಗಳು ಆಗಬಾರದು. ಇದರಿಂದಾಗುವ ಅಮಾಯಕರ ಜೀವಹಾನಿ ಆಗೋದು ತುಂಬಾ ಬೇಸರದ ಸಂಗತಿ ಎಂದು ತಿಳಿಸಿದರು.
ಜೊತೆಗೆ ದೆಹಲಿ ಭೇಟಿ ಹಾಗೂ ಮೈಸೂರಿನಲ್ಲಿ ಸತತ
10 ಗಂಟೆಗಳ ಕಾಲ ನಡೆದ ಕೆಡಿಪಿ ಸಭೆಯ ಪ್ರಮುಖ ವಿಚಾರ ಕುರಿತು ಅವರು ವಿವರಿಸಿದರು.

- Advertisement - 

ಪೊಲೀಸ್ ಅಧಿಕಾರಿಗಳಿಗೆ ಸೂಚನೆ:
ಪೊಲೀಸ್ ಅಧಿಕಾರಿಗಳಿಗೆ ಗೊತ್ತಿಲ್ಲದೆ ಸಂಘಟಿತ ಅಪರಾಧಗಳು ನಡೆಯಲು ಸಾಧ್ಯವಿಲ್ಲ. ಆದ್ದರಿಂದ ಅಪರಾಧ ಪ್ರಮಾಣಗಳು ಹೆಚ್ಚಾದರೆ ಪೊಲೀಸ್ ಅಧಿಕಾರಿಗಳೇ ಹೊಣೆ ಆಗ್ತಾರೆ. ಮೈಸೂರನ್ನು ಡ್ರಗ್ಸ್​ ಮುಕ್ತ ಜಿಲ್ಲೆ ಮಾಡಲು ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

ಕೋಮು ಗಲಭೆ ಪೀಡಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಬ್ಬರು ಅಧಿಕಾರಿಗಳನ್ನು ಬದಲಾಯಿಸಿದ ತಕ್ಷಣ ಇಡೀ‌ ಜಿಲ್ಲೆಯಲ್ಲಿ ಈಗ ಅನಾಗರಿಕ ಘಟನೆಗಳು ಬಂದ್ ಆಗಿವೆ. ಅಲ್ಲಿ ಇಬ್ಬರು ಅಧಿಕಾರಿಗಳಿಂದ ಇಷ್ಟೆಲ್ಲಾ ಸಾಧ್ಯ ಆಗುತ್ತೆ ಎನ್ನುವುದಾದರೆ ಉಳಿದ ಕಡೆಗಳಲ್ಲೂ ಸಾಧ್ಯವಿದೆ. ಪೊಲೀಸ್ ಅಧಿಕಾರಿಗಳು ಮನಸ್ಸು ಮಾಡಿ, ವೃತ್ತಿಪರವಾಗಿ ನಡೆದುಕೊಂಡರೆ ಸಾಕು ಎನ್ನುವ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement - 

ಡೀಸಿ, ಎಸಿ, ತಹಶೀಲ್ದಾರ್ ನ್ಯಾಯಾಲಯಗಳಲ್ಲಿನ ಪ್ರಕರಣಗಳನ್ನು ಶೀಘ್ರ ಇತ್ಯರ್ಥ ಪಡಿಸಲು ಸೂಚನೆ ನೀಡಿದ್ದೇನೆ. ಮೈಸೂರು ಜಿಲ್ಲೆಯಲ್ಲಿ ಕಳೆದ ಎರಡೂ ವರ್ಷಗಳಲ್ಲಿ ಇದ್ದ 8 ಸಾವಿರ ಪ್ರಕರಣಗಳಲ್ಲಿ ಈಗಾಗಲೇ 7,540ರಷ್ಟು ಪ್ರಕಣಗಳು ಇತ್ಯರ್ಥ ಆಗಿವೆ. ಉಳಿದವೂ ಬೇಗ ಇತ್ಯರ್ಥ ಆಗಬೇಕು. ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಸ್ಟೆಲ್​ಗಳಿಗೆ ದಿಢೀರ್ ಭೇಟಿ ನೀಡಿ ಊಟ ಮತ್ತು ಹಾಸ್ಟೆಲ್ ಗುಣಮಟ್ಟ ಪರಿಶೀಲಿಸಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.

ನಾನು ಮೈಸೂರಿನವನೇ ಆಗಿರುವುದರಿಂದ KDP ಸಭೆ ನಾನೇ ನಡೆಸುತ್ತೇನೆ. ಪೊಲೀಸ್ ಅಧಿಕಾರಿಗಳು ‌ಘಟನಾ ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಅಪರಾಧಿಗಳು, ರಿಯಲ್ ಎಸ್ಟೇಟ್, ರೌಡಿಗಳನ್ನು ಹೊರತುಪಡಿಸಿ ಪೊಲೀಸರು ಸಾರ್ವಜನಿಕರ ಜೊತೆ ಉತ್ತಮ‌ವಾಗಿ ವರ್ತಿಸುವಂತೆ ಹೇಳಲಾಗಿದೆ ಎಂದು ಹೇಳಿದರು.

ಗ್ರೇಟರ್ ಮೈಸೂರು ಬಗ್ಗೆ ಪ್ರಾಥಮಿಕ ಚರ್ಚೆ ಆಗಿದೆ. ಇನ್ನಷ್ಟು ಸಮಗ್ರ ಚರ್ಚೆ ಬಳಿಕ ಕ್ಯಾಬಿನೆಟ್​ ನಲ್ಲಿ ಇಟ್ಟು ಚರ್ಚಿಸಲಾಗುವುದು. ಕ್ಯಾಬಿನೆಟ್ ತೀರ್ಮಾನದಂತೆ ನಿರ್ಧಾರ ಮಾಡಲಾಗುವುದು ಎಂದು ಸಿದ್ದರಾಮಯ್ಯ ಅವರು ಮಾಹಿತಿ ನೀಡಿದರು.

Share This Article
error: Content is protected !!
";