ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲಗೆ ಜಾಮೀನು ಪ್ರಜಾಪ್ರಭುತ್ವಕ್ಕೆ ಸಿಕ್ಕ ಜಯ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ ಅವರಿಗೆ ಜಾಮೀನು ಸಿಕ್ಕು ಜೈಲಿನಿಂದ ಬಿಡುಗಡೆ ಆಗಿರುವುದು ಪ್ರಜಾಪ್ರಭುತ್ವ ಮತ್ತು ಸತ್ಯಕ್ಕೆ ಸಿಕ್ಕ ಜಯ ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಬಿ.ಇ.ಜಗದೀಶ್ ಹೇಳಿದರು.

ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ, ಸುಪ್ರೀಂ ಕೋರ್ಟ್ ನೀಡಿರುವ ಜಾಮೀನು ಸ್ವಾಗತರ್ಹವಾಗಿದ್ದು ಪಕ್ಷದ ಅಭಿಮಾನಿಗಳಿಗೆ ಸಂತಸ ತಂದಿದೆ.  ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಅತ್ಯಂತ ತೀಕ್ಷ್ಣವಾಗಿ ಪಂಜರದ ಗಿಳಿಯಾಗಿ ಕೆಲಸ ಮಾಡಬಾರದು ಎಂದು ಹೇಳಿರುವುದು ಹಲವರಿಗೆ ಎಚ್ಚರಿಕೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಪಂಜರದ ಗಿಳಿಯಾಗಿ ಎನ್ನುವ ಅರ್ಥ ಒಂದು ಪಕ್ಷದ ಪರವಾಗಿ ಕೆಲಸ ಮಾಡಬಾರದೆಂದು ಹೇಳಿದ ರೀತಿಯಾಗಿದೆ. ಇದರಿಂದ ರಾಜಕೀಯ ಪಕ್ಷದವರು ಅಧಿಕಾರಿಗಳು ತಪ್ಪು ಹೆಜ್ಜೆಗಳನ್ನು ಇಡಬಾರದು  ಕಾನೂನು ಎಲ್ಲರಿಗೂ ಒಂದೇ ಎನ್ನುವುದನ್ನು ಸಾರಿ ಹೇಳಿದೆ ಎಂದು ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ಅರವಿಂದ್ ಕೇಜ್ರಿವಾಲ ರವರು ಪಕ್ಷವನ್ನು ಬಲಪಡಿಸುತ್ತಾರೆ. ಕರ್ನಾಟಕ ಹಾಗೂ ದೇಶದಲ್ಲಿ ಆಮ್ ಆದ್ಮಿ ಪಕ್ಷ  ಅಧಿಕಾರಕ್ಕೆ ಬರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

 

 

 

- Advertisement -  - Advertisement - 
Share This Article
error: Content is protected !!
";