ಮೈಸೂರಿನಲ್ಲಿ ರಹಸ್ಯ ಹೈಟೆಕ್ ಡ್ರಗ್ಸ್ ಘಟಕ ಪತ್ತೆ ಹಚ್ಚಿದ ದೆಹಲಿ ಪೊಲೀಸರು

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಗೃಹ ಸಚಿವರ ಹಾಗೂ ಗೃಹ ಇಲಾಖೆಯ ವೈಫಲ್ಯಕ್ಕೆ ಮತ್ತೊಂದು ಸಾಕ್ಷಿ ಬಯಲಾಗಿದೆ! ಮೈಸೂರಿನಲ್ಲಿ ರಹಸ್ಯ ಹೈಟೆಕ್ ಡ್ರಗ್ಸ್ ಘಟಕ ಕಾರ್ಯ ನಿರ್ವಹಿಸುತ್ತಿದ್ದುದನ್ನು
@narcoticsbureau ಬಯಲುಗೊಳಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ಮೈಸೂರಿನಲ್ಲಿ ಡ್ರಗ್ಸ್ ದಂಧೆಯ ಜಾಲ, ತಯಾರಿಕಾ ಘಟಕವನ್ನು ಮಹಾರಾಷ್ಟ್ರ ಪೊಲೀಸ್ ಪತ್ತೆ ಮಾಡಿತ್ತು. ರಾಜ್ಯದ ಗೃಹ ಇಲಾಖೆಯ ಅಸಮರ್ಥ್ಯಕ್ಕೆ ಗೃಹ ಸಚಿವ ಡಾ.ಜಿ ಪರಮೇಶ್ವರ ಅವರೇ ನೇರ ಹೊಣೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದ್ದಾರೆ.

ವಿಶೇಷವಾಗಿ ನಮ್ಮ ಯುವಜನತೆ, ಶಾಲಾ ಮಕ್ಕಳು ಕೂಡ ಈ ಡ್ರಗ್ಸ್ ನಂತಹ ಅಪಾಯಕಾರಿ ಜಾಲಕ್ಕೆ ಬಲಿಯಾಗುತ್ತಿರುವ ವರದಿಗಳು ಪದೇ ಪದೇ ಹೊರಬರುತ್ತಿದ್ದರೂ, ಕರ್ನಾಟಕ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ, ಅಸಾಮರ್ಥ್ಯ, ವೈಫಲ್ಯಗಳು ಅದರ ಆದ್ಯತೆ ಮತ್ತು ಕಾಳಜಿಗಳನ್ನು ಬಯಲು ಮಾಡಿದೆ.

- Advertisement - 

ಪರಿಸ್ಥಿತಿ ಕೈಮೀರುವ ಮುನ್ನ, ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು, ನಮ್ಮ ಪೊಲೀಸ್ ಇಲಾಖೆಗೆ ಸ್ವತಂತ್ರವಾಗಿ ಕಾರ್ಯ ನಿರ್ವಹಿಸಲು ಅವಕಾಶ ನೀಡಿ, ರಾಜ್ಯದಲ್ಲಿ ಡ್ರಗ್ಸ್ ದಂಧೆಯನ್ನು  ಮಟ್ಟ ಹಾಕಬೇಕು ಎಂದು ವಿಜಯೇಂದ್ರ ಒತ್ತಾಯಪೂರ್ವಕವಾಗಿ ಆಗ್ರಹಿಸಿದ್ದಾರೆ.

 

- Advertisement - 

 

Share This Article
error: Content is protected !!
";