ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪ್ರಧಾನಿಮಂತ್ರಿ ನರೇಂದ್ರ ಮೋದಿ ಅವರು, ಗೃಹ ಸಚಿವ ಅಮಿತ್ ಶಾ ಮತ್ತು ಕೇಂದ್ರ ಸಚಿವರು ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಬಿಜೆಪಿ ಪಕ್ಷವು ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದೆ. ನೂತನ ಶಾಸಕರಾಗಿ ಆಯ್ಕೆಯಾದ ನನ್ನ ಮಿತ್ರಪಕ್ಷದ ಎಲ್ಲಾ ನಾಯಕರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೃದಯಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಪ್ರಧಾನಿಗಳ ಮಹತ್ವಾಕಾಂಕ್ಷೆಯ ವಿಕಸಿತ ಭಾರತ, ಆತ್ಮನಿರ್ಭರ ಭಾರತ ಮತ್ತು ಅಭಿವೃದ್ದಿ ಪೂರಕ ಆಡಳಿತಕ್ಕೆ ಮನ್ನಣೆ ನೀಡಿ, ತುಷ್ಟೀಕರಣ ರಾಜಕೀಯವನ್ನು ಸ್ಪಷ್ಟವಾಗಿ ತಿರಸ್ಕರಿಸಿರುವುದಕ್ಕೆ ಈ ಫಲಿತಾಂಶ ಅತ್ಯುತ್ತಮ ಉದಾಹರಣೆ ಎಂದು ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.
ಈ ಜನಾದೇಶವು ಬಲಿಷ್ಠ ನಾಯಕತ್ವ, ಆರ್ಥಿಕ ಬೆಳವಣಿಗೆ ಮತ್ತು ರಾಷ್ಟ್ರೀಯ ಭದ್ರತೆಗೆ ಸಿಕ್ಕಿರುವ ಅಭೂತಪೂರ್ವ ಬೆಂಬಲ ಎಂದು ನಾನು ಭಾವಿಸುತ್ತೇನೆ. ನಮ್ಮ ಮಿತ್ರಪಕ್ಷ ಬಿಜೆಪಿ ಗೆಲುವಿಗೆ ಶ್ರಮಿಸಿದ ಎಲ್ಲಾ ನಾಯಕರು, ಕಾರ್ಯಕರ್ತರಿಗೆ ಕುಮಾರಸ್ವಾಮಿ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.