ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ದಿನಾಂಕ ಘೋಷಣೆಗೆ ಆಗ್ರಹ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ದಿನಾಂಕ ಘೋಷಣೆ ಮಾಡುವಂತೆ ಒತ್ತಾಯಿಸಿ ಚಿತ್ರದುರ್ಗದ ಅಪರ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಕರ್ನಾಟಕ ಏಕೀಕರಣ ರಕ್ಷಣಾ ಸೇನಾ ಸಮಿತಿ ಚಿತ್ರದುರ್ಗ ಜಿಲ್ಲಾ ಘಟಕ ವತಿಯಿಂದ ಮನವಿ ಸಲ್ಲಿಸಲಾಯಿತು.

 ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಬಿ ಎಸ್ ಮಂಜಣ್ಣ ಮಾತನಾಡಿ ಸುಮಾರು ವರ್ಷಗಳ ನಂತರ ಬಳ್ಳಾರಿ ಜಿಲ್ಲೆಯಲ್ಲಿ 88 ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಸರ್ಕಾರ ಘೋಷಣೆ ಮಾಡಿದೆ. ಕೆಳೆದ 2025 ಡಿಸೆಂಬರ್ ತಿಂಗಳಲ್ಲಿ ಸಮ್ಮೇಳನ ನಡೆಸಲು ತಯಾರಿ ಮಾಡಲಾಗಿತ್ತು. ಆದರೆ ಕಾರಣಾಂತರಗಳಿಂದ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿದ್ದು ನಾಡಿನ ಸಾಹಿತಿ ಕಲಾವಿದರಿಗೆ ನೋವುಂಟು ಮಾಡಿದೆ.

- Advertisement - 

ಆದ್ದರಿಂದ ಈ ತಿಂಗಳಲ್ಲಿ ಸಮ್ಮೇಳನ ದಿನಾಂಕ ಘೋಷಣೆ ಮಾಡಬೇಕೆಂದು ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ಕರ್ನಾಟಕ ಏಕೀಕರಣ ರಕ್ಷಣಾ ಸೇನಾ ಸಮಿತಿ ಜಿಲ್ಲಾ ಘಟಕದ ಸದಸ್ಯರಾದ ವಸಂತ, ಸುಧಾಕರ್, ಮಾರೆಪ್ಪ, ಗಣೇಶ ಇತರರು ಇದ್ದರು.

- Advertisement - 

 

 

Share This Article
error: Content is protected !!
";