ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಬೇಡಿಕೆಗಳ ಕುರಿತಾಗಿ ಜಂಟಿ ಕ್ರಿಯಾ ಸಮಿತಿ ಪ್ರತಿನಿಧಿಗಳೊಂದಿಗೆ ಮಂಗಳವಾರ ಸಭೆ ನಡೆಸಿ, ಅವರ ಅಹವಾಲನ್ನು ಆಲಿಸಿದರು.
ಸಾರಿಗೆ ಮತ್ತು ಮುಜರಾಯಿ ಇಲಾಖೆಗಳ ಸಚಿವರಾದ ರಾಮಲಿಂಗರೆಡ್ಡಿ, ಕಾರ್ಮಿಕ ಮುಖಂಡರು, ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.