ಶಾಸಕ ಮುನಿರತ್ನ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ

News Desk

ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:
ಒಕ್ಕಲಿಗ ಸಮಾಜದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಶಾಸಕ ಮುನಿರತ್ನ ಅವರ ವಿರುದ್ಧ ಕಠಿಣ ಕಾನೂನು ಕ್ರಮ ವಹಿಸುವಂತೆ ಆಗ್ರಹಿಸಿ ಒಕ್ಕಲಿಗರ ಯುವ ವೇದಿಕೆ ವತಿಯಿಂದ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.

 ಒಕ್ಕಲಿಗ ಹಾಗೂ ದಲಿತ ಹೆಣ್ಣು ಮಕ್ಕಳ ಬಗ್ಗೆ ಅಶ್ಲೀಲವಾಗಿ ಮಾತನಾಡಿರುವ ಶಾಸಕ ಮುನಿರತ್ನ ಅವರನ್ನು ಶಾಸಕ ಸ್ಥಾನದಿಂದ ಅಮಾನತುಗೊಳಿಸಬೇಕು. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಶಾಸಕ ಮುನಿರತ್ನ ಅತ್ಯಾಚಾರಿ ಹಾಗೂ ಹನಿಟ್ರಾಪ್‌ನ ರೂವಾರಿಯಾಗಿದ್ದಾರೆ.

ಗುತ್ತಿಗೆದಾರರನ್ನು ಶೋಷಣೆ ಮಾಡಿದ್ದಲ್ಲದೆ, ಹಣ ವಸೂಲಿ ಮಾಡಿದ್ದಾರೆ. ಗುತ್ತಿಗೆದಾರರ ಜೊತೆಗಿನ ಸಂಭಾಷಣೆಯಲ್ಲಿ ಹೆಣ್ಣುಮಕ್ಕಳ ವಿಷಯವಾಗಿ, ಒಕ್ಕಲಿಗ ಹಾಗೂ ಪರಿಶಿಷ್ಟರ ಬಗ್ಗೆ ಅಸಭ್ಯವಾಗಿ ಮಾತನಾಡಿದ್ದಾರೆ ಎಂದು ಮನವಿಯಲ್ಲಿ ವಿವರಿಸಲಾಗಿದೆ.

ಒಕ್ಕಲಿಗ ಸಮುದಾಯ ನಾಡಿಗೆ ನೀಡಿರುವ ಕೊಡುಗೆ ಅಪಾರ. ಒಕ್ಕಲುತನ, ಪಶುಪಾಲನೆ, ಕೃಷಿ, ಹೈನುಗಾರಿಕೆ ಮಾಡಿ ಒಕ್ಕಲಿಗರು ನಾಡನ್ನು ಕಟ್ಟಿದ್ದಾರೆ. ರಾಜಕೀಯವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಅಲ್ಲದೇ ನಾಡಿನ ಸಂಸ್ಕೃತಿಗೆ ಬಹುದೊಡ್ಡ ಕೊಡುಗೆ ನೀಡಿದ್ದಾರೆ.

ನಾಡಪ್ರಭು ಕೆಂಪೇಗೌಡರಾದಿಯಾಗಿ ಸಮಾಜದ ಹಲವರು ನಾಡಿನ ಸಂಸ್ಕೃತಿ, ಪರಂಪರೆ ಉಳಿಸಿ ಬೆಳೆಸಿದ್ದಾರೆ. ಶ್ರೀಕೃಷ್ಣದೇವರಾಯ ಸಾರ್ವಭೌಮತ್ವ ಪಡೆಯಲು ಗಂಗರು, ಚೋಳರು ಆಡಳಿತ ನಡೆಸಿ ನಾಡಿನ ಸಂಸ್ಕೃತಿ ಉಳಿಸಲು ಒಕ್ಕಲಿಗ ಜನಾಂಗ ಕೊಡುಗೆ ನೀಡಿದೆ. ಇಂತಹ ಸಮುದಾಯದ ಬಗ್ಗೆ ಅವಹೇಳನಕಾರಿ ಮಾತನಾಡಿರುವುದು ಇಡೀ ಒಕ್ಕಲಿಗ ಜನಾಂಗಕ್ಕೆ ನೋವುಂಟಾಗಿದೆ ಎಂದಿದ್ದಾರೆ.

 ಇಂತಹ ನಾಚಿಕೆಗೆಟ್ಟ ಶಾಸಕನನ್ನು ಗೆಲ್ಲಿಸಿದ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಜನತೆ ತಲೆ ತಗ್ಗಿಸುವಂತಾಗಿದೆ. ಶಾಸಕ ಸ್ಥಾನದಿಂದ ವಜಾಗೊಳಿಸಬೇಕು. ಇವರ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕಾನೂನು ಕ್ರಮವಹಿಸಬೇಕೆಂದು ಆಗ್ಹರಿಸಿದರು.

ಸಂಘದ ಜಿಲ್ಲಾಧ್ಯಕ್ಷ ರಮೇಶ್ ಹೆಗ್ಡೆ, ಯುವ ಅಧ್ಯಕ್ಷ ಚೇತನ್ ಗೌಡ, ಮುಖಂಡರಾದ ರಘು ಗೌಡ, ಭಾರತಿ ರಾಮಕೃಷ್ಣ, ಯಮುನಾ ರಂಗೇಗೌಡ, ರಂಗೇಗೌಡ, ತಮ್ಮಯ್ಯ, ಹರ್ಷಿತ್ ಗೌಡ, ಸತೀಶ್. ವಿಜಯ್, ಮೋಹನ್ ಮೊದಲಾದವರಿದ್ದರು.

 

- Advertisement -  - Advertisement - 
Share This Article
error: Content is protected !!
";