ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಇತ್ತೀಚೆಗೆ ಮಾರುಕಟ್ಟೆಗೆ ಬಿಡುಗಡೆ ಮಾಡಿರುವ ನಂದಿನಿ ಇಡ್ಲಿ ದೋಸೆ ಹಿಟ್ಟಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು! ಎನ್ನುವ ರೀತಿಯಲ್ಲಿ ಬೇಡಿಕೆ ಹೆಚ್ಚಾಗಿದೆ ಎಂದು ಕಾಂಗ್ರೆಸ್ ಮೆಚ್ಚುಗೆ ವ್ಯಕ್ತಪಡಿಸಿದೆ.
ಕನ್ನಡಿಗರ ಸ್ವಾಭಿಮಾನದ ಪ್ರತೀಕವಾದ ನಂದಿನಿಯ ರುಚಿಕರ ದೋಸೆ ಇಡ್ಲಿ ಹಿಟ್ಟಿಗೆ ಗ್ರಾಹಕರು ಮನಸೋತಿದ್ದು, ಮಾರುಕಟ್ಟೆಗೆ ಲಗ್ಗೆಯಿಟ್ಟ ಕೇವಲ ಮೂರೇ ದಿನಗಳಲ್ಲಿ ದಾಖಲೆಯ ಮಟ್ಟದಲ್ಲಿ ಮಾರಾಟವಾಗುವ ಮೂಲಕ ತನ್ನ ಛಾಪು ಮೂಡಿಸಿದೆ.
ವೇ ಪ್ರೋಟೀನ್ ಆಧಾರಿತ ಉತ್ಕ್ರುಷ್ಟ ಗುಣಮಟ್ಟದ ನಂದಿನಿ ಇಡ್ಲಿ ಹಾಗೂ ದೋಸೆ ಹಿಟ್ಟನ್ನು ಗ್ರಾಹಕರು ಖುಷಿಯಿಂದ ಮುಗಿಬಿದ್ದು ಖರೀದಿಸುತ್ತಿದ್ದು ಕೇವಲ ಮೂರೇ ದಿನಗಳಲ್ಲಿ 2.250 ಮೆಟ್ರಿಕ್ ಟನ್ ಇಡ್ಲಿ – ದೋಸೆ ಹಿಟ್ಟು ಸೇಲ್ ಆಗಿದೆ. ಇದು ನಮ್ಮನಂದಿನಿ ನಮ್ಮಹೆಮ್ಮೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿ ಹರ್ಷ ವ್ಯಕ್ತಪಡಿಸಿದೆ.