ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಪರಿಶಿಷ್ಟರ ಪಟ್ಟಿಯಲ್ಲಿರುವ ಅಲೆಮಾರಿ ಜನಾಂಗದ ೫೯ ಜಾತಿಗಳಿಗೆ ಪ್ರತ್ಯೇಕ ಶೇ. ೧ ರಷ್ಟು ಮೀಸಲಾತಿಯನ್ನು ನೀಡುವಂತೆ ಸ್ಲಂ ಜನಾಂದೋಲನ-ಕರ್ನಾಟಕದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿ ಕಚೇರಿ ಸಹಾಯಕರ ಮೂಲಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಲಾಯಿತು.
ಆ.೧, ೨೦೨೪ ರಂದು ಸುಪ್ರೀಂಕೋರ್ಟ್ ಒಳ ಮೀಸಲಾತಿ ಜಾರಿಗೊಳಿಸುವ ಅಧಿಕಾರ ಆಯಾ ರಾಜ್ಯ ಸರ್ಕಾರಗಳಿಗಿದೆ ಎಂದು ಮಹತ್ವದ ತೀರ್ಪು ನೀಡಿತು. ತದ ನಂತರ ದತ್ತಾಂಶ ಸಂಗ್ರಹಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಾಗಮೋಹನ್‌ದಾಸ್ ಆಯೋಗ ರಚಿಸಿದರು. ಆಯೋಗವು ಅಸ್ಪೃಶ್ಯ,
ಅಲೆಮಾರಿ ಜಾತಿ ಗುಂಪಿಗೆ ನೀಡಿದ್ದ ಪ್ರತ್ಯೇಕ ಶೇ.೧ ರ ಮೀಸಲಾತಿ ಕಿತ್ತುಕೊಂಡು ಸ್ಪಶ್ಯ ಜಾತಿಗಳಾದ ಲಂಬಾಣಿ, ಭೋವಿ, ಕೊರಮ, ಕೊರಚ ಜಾತಿಗಳ ಗುಂಪಿಗೆ ನೀಡಿ ಸುಪ್ರಿಂಕೋರ್ಟ್ ಆದೇಶ ಉಲ್ಲಂಘಿಸಿದೆ. ಆದ್ದರಿಂದ ಅಲೆಮಾರಿ ಸಮುದಾಯಗಳಿಗೆ ಆಗಿರುವ ಘೋರ ಅನ್ಯಾಯವನ್ನು ಸರಿಪಡಿಸಿ ಪ್ರತ್ಯೇಕ ಒಂದರಷ್ಟು ಮೀಸಲಾತಿಯನ್ನು ಕಲ್ಪಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಮಂಜಣ್ಣ, ಸುಧಾ ಮಹೇಶ್, ಭಾಗ್ಯಮ್ಮ, ಅಲೆಮಾರಿ ಸಮುದಾಯದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

