ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಪೊಲೀಸ್ ಇಲಾಖೆ ವತಿಯಿಂದ 8ನೇ ತಂಡದ ನಾಗರೀಕ, 3ನೇ ತಂಡದ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಮತ್ತು 1ನೇ ತಂಡದ ಜೈಲ್ ವಾರ್ಡರ್ಗಳ ನಿರ್ಗಮನ ಪಥ ಸಂಚಲನ ಸೆ. 23 ರಂದು ಐಮಂಗಲದ ಪೊಲೀಸ್ ತರಬೇತಿ ಶಾಲೆಯ ಪೊಲೀಸ್ ಕವಾಯತು ಮೈದಾನದಲ್ಲಿ ಏರ್ಪಡಿಸಲಾಗಿದೆ.
ದಾವಣಗೆರೆ ಪೂರ್ವ ವಲಯದ ಪೊಲೀಸ್ ಉಪ ಮಹಾ ನಿರೀಕ್ಷಕರಾದ ಬಿ. ರಮೇಶ್ ಅವರಿಂದ ಪಥಸಂಚಲನ ಪರಿವೀಕ್ಷಣೆ ಮತ್ತು ಬಹುಮಾನ ವಿತರಣೆ ನಡೆಯಲಿದೆ.
ಜಿಲ್ಲಾ ಪೊಲೀಸ್ ಅಧೀಕ್ಷಕ ರಂಜಿತ್ ಕುಮಾರ್ ಬಂಡಾರು ಸಮಾರಂಭದಲ್ಲಿ ಉಪಸ್ಥಿತರಿರುವರು ಎಂದು ಐಮಂಗಲದ ಪೊಲೀಸ್ ತರಬೇತಿ ಶಾಲೆ ಪ್ರಾಂಶುಪಾಲ ಪಿ. ಪಾಪಣ್ಣ ತಿಳಿಸಿದ್ದಾರೆ.