ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್(ಹೆಚ್‌ಎಎಲ್) ಘಟಕಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಭೇಟಿ ನೀಡಿ ಪರಿಶೀಲಿಸಿದರು.
ಅಧಿಕಾರಿಗಳಿಂದ ವಿಮಾನ, ಹೆಲಿಕಾಪ್ಟರ್, ಇಂಜಿನ್, ಏವಿಯಾನಿಕ್ಸ್, ಎಲೆಕ್ಟ್ರಾನಿಕ್ಸ್, ಹಾಗೂ ಬಿಡಿಭಾಗಗಳ ವಿನ್ಯಾಸ, ಅಭಿವೃದ್ಧಿ ಮತ್ತು ಉತ್ಪಾದನೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಲಾಯಿತು.
ಹೆಚ್‌ಎಎಲ್‌ಸಂಸ್ಥೆಯು ನಮ್ಮ ಹೆಮ್ಮೆಯಾಗಿದ್ದು, ಇದು ದೇಶ ನಿರ್ಮಾಣದಲ್ಲಿ ಮಹತ್ವದ ಪಾತ್ರವಹಿಸಿದೆ ಎಂದು ಡಿಸಿಎಂ ಹರ್ಷ ವ್ಯಕ್ತಪಡಿಸಿದರು.

