ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್ ಸರ್ಕಾರದಲ್ಲಿ ರಾಜ್ಯದ ಆಡಳಿತ ಹಳಿ ತಪ್ಪಿದೆ. ಪೊಲೀಸ್ ರಾಜ್ ಅಧಿಕಾರದಲ್ಲಿದೆಯೋ ಎನ್ನುವ ಅನುಮಾನ ಕಾಡುತ್ತಿದೆ. ಪ್ರತಿಯೊಂದು ವಿಚಾರದಲ್ಲೂ ಪೊಲೀಸ್ ಇಲಾಖೆಯನ್ನು ರಾಜ್ಯ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿ ಕಾರಿದ್ದಾರೆ.
ಒಬ್ಬ ಜನಪ್ರತಿನಿಧಿಯನ್ನು ಕಾನೂನುಬಾಹಿರವಾಗಿ ಬಂಧಿಸಿ, ಅಮಾನವೀಯವಾಗಿ ನಡೆಸಿಕೊಂಡಿರುವ ರೀತಿ ಅಕ್ಷಮ್ಯ ಅಪರಾಧ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.