ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಕ್ರಮ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕೃಷಿಯಲ್ಲಿ ದೇಸಿ ತಳಿಗಳ ಸಂರಕ್ಷಣೆಗೆ ಸರ್ಕಾರ ಮುಂದಾಗಿದ್ದು, ಕೃಷಿ ಇಲಾಖೆ ಮೂಲಕ ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಕ್ರಮಘೋಷಿಸಿದೆ. ದೇಸಿ ತಳಿಗಳನ್ನು ಸಂರಕ್ಷಿಸುತ್ತಿರುವ ರೈತರು ಈ ಕಾರ್ಯಕ್ರಮದ ಉಪಯೋಗ ಪಡೆಯಲು ವಿವರವನ್ನು ಹತ್ತಿರದ ರೈತ ಸಂಪರ್ಕ ಕೇಂದ್ರದಲ್ಲಿ ದೇಸಿ ತಳಿಗಳ ನೋಂದಾಯಿಸಬೇಕಿದೆ.
ಆಯಾ ಪ್ರದೇಶದಲ್ಲಿ ಸ್ಥಳೀಯ ತಳಿಗಳು ಅಥವಾ ಸಾಂಪ್ರದಾಯಕ ಪದ್ಧತಿಯಿಂದ ಅಭಿವೃದ್ಧಿ ನಿರ್ವಹಿಸಲ್ಪಡುವ ತಳಿಗಳನ್ನು ದೇಸಿ ತಳಿಗಳೆಂದು ಕರೆಯಲಾಗಿದು, ರೈತರು ಸಾಂಪ್ರದಾಯಕ, ಪರಂಪರೆ, ಜಾನಪದ ಪ್ರಭೇದಗಳಾಗಿರುತ್ತವೆ. ಇಂತಹ ವಿಶೇಷ ದೇಶಿ ತಳಿಗಳನ್ನು ಉಳಿಸಿಕೊಂಡು ಬಂದಿರುವ ರೈತರು ಕೃಷಿ ಇಲಾಖೆಯೊಂದಿಗೆ ಕೆಲಸ ಮಾಡಲು ಅವಕಾಶವಾಗಲಿದೆ.

ಈ ಕಾರ್ಯಕ್ರಮದಡಿ ಆಯ್ಕೆಯಾದ ಬೆಳೆಗಳೆಂದರೆ ಭತ್ತ, ರಾಗಿ, ಜೋಳ, ತೊಗರಿ, ಹುರುಳಿ, ಅವರೆ, ಅಲಸಂದೆ, ಮಡಕಿಕಾಳು, ಹುಚ್ಚಳು, ಕುಸುಬೆ, ಎಳ್ಳು, ನವಣೆ, ಸಾಮೆ, ಊದಲು, ಕೊರಲೆ, ಹಾರಕ, ಬರಗು ಮತ್ತು ಸಲಹಾ ಸಮಿತಿ ಶಿಫಾರಸು ಮಾಡುವ ಇತರೆ ಬೆಳೆಗಳಲ್ಲಿ ದೇಸಿ ತಳಿಗಳಿದ್ದರೆ ರೈತರು ಸಮೀಪದ ರೈತ ಸಂಪರ್ಕ ಕೇಂದ್ರದಲ್ಲಿ ನೋಂದಾಯಿಸಿಕೊಳ್ಳಬೇಕಿದೆ.

ದೇಸಿ ತಳಿಗಳ ವಿಶಿಷ್ಟ ಗುಣಲಕ್ಷಣಗಳು ಮತ್ತು ಭೌಗೋಳಿಕ ಮೂಲಗಳ ಕಾರಣದಿಂದ ವೈಜ್ಞಾನಿಕವಾಗಿ ಅಭಿವೃದ್ಧಿ ಪಡಿಸಲಾದ ಅಧಿಸೂಚಿತ ಪ್ರಭೇದಗಳಿಗಿಂತ ದೇಸಿ ತಳಿಗಳು ಪೆÇೀಷಕಾಂಶಗಳಲ್ಲಿ ಸಮೃದ್ಧವಾಗಿವೆ. ಆದರೆ, ಕೆಲವೇ ರೈತರ ಇಂತಹ ದೇಸಿ ತಳಿ ಕೃಷಿ ಮಾಡುವುದನ್ನು ಮುಂದುವರೆಸಿರುವ ಹಿನ್ನೆಲೆಯಲ್ಲಿ ನೂತನ ಕಾರ್ಯಕ್ರಮ ಪರಿಚಯಿಸಲಾಗಿದೆ.

ಕಣ್ಮರೆಯಾಗುತ್ತಿರುವ ತಳಿಗಳನ್ನು ಸಂರಕ್ಷಿಸುವ ಜತೆಗೆ ಆಯಾ ಸ್ಥಳೀಯ ಪ್ರದೇಶಕ್ಕೆ ಸೂಕ್ತವಾದ ದೇಸಿ ತಳಿಗಳ ಗುರುತಿಸುವಿಕೆ ಹಾಗೂ ಸಂರಕ್ಷಣೆ ಗುರಿ ಹೊಂದಲಾಗಿದೆ. ಗುರುತಿಸಿದ ದೇಸಿ ತಳಿಗಳನ್ನು ಅಭಿವೃದ್ಧಿಪಡಿಸಿ ಬಿಡುಗಡೆ ಮಾಡುವುದು. ದೇಸಿ ತಳಿಗಳನ್ನು ಹಿಂದಿನಿಂದಲೂ ಸಂರಕ್ಷಿಸಿ, ಕೃಷಿ ಮಾಡುತ್ತಿರುವ ರೈತರಿಗೆ ಬೆಂಬಲ ನೀಡುವ ಜತೆಗೆ ದೇಸಿ ತಳಿಗಳ ಜನಪ್ರಿಯತೆಗೆ ಬೆಂಬಲ ನೀಡುವ ಸಂಕಲ್ಪ ಮಾಡಲಾಗಿದೆ.

ರೈತರನ್ನು ಗುರುತಿಸುವುದು: ದೇಸಿ ತಳಿಗಳನ್ನು ಸಂರಕ್ಷಿಸಿ ಮತ್ತು ಬೆಳೆಸುವ ಮೂಲಕ ಕೃಷಿ ಪರಂಪರೆ ಮುಂದುವರೆಸುತ್ತಿರುವ ರೈತರನ್ನು ಗುರುತಿಸಿಸುವುದು ಮತ್ತು ಉತ್ತೇಜಿಸುವುದು ಅಗತ್ಯವಿದ್ದು, ಇದು ದೇಸಿ ತಳಿಗಳ ನಿರಂತರ ಕೃಷಿ ಪೆÇ್ರೀತ್ಸಾಹಿಸಲು ಜೀವ ವೈವಿಧ್ಯತೆ ಬೆಂಬಲಿಸಲು ಹಾಗೂ ಸುಸ್ಥಿರ ಕೃಷಿ ಪದ್ಧತಿಗಳನ್ನು ಪೆÇೀಷಿಸಲು ಸಹಕಾರಿಯಾಗಲಿದೆ.

ದೇಸಿ ತಳಿಗಳ ಸಂರಕ್ಷಣೆ ಮತ್ತು ಕೃಷಿಯಲ್ಲಿ ತೊಡಗಿರುವ ರೈತರಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಒಪ್ಪಿಗೆ ಇರಬೇಕು. ಬೀಜ ಬ್ಯಾಂಕ್‍ನಲ್ಲಿರಿಸಲು ರೈತರು ಕಡ್ಡಾಯವಾಗಿ ಅಗತ್ಯ ಪ್ರಮಾಣದ ದೇಸಿ ತಳಿಗಳ ಬೀಜಗಳನ್ನು ನೀಡಲು ಸಿದ್ಧರಿರಬೇಕು. ಜಾನುವಾರು ನಿರ್ವಹಣೆ, ಕೊಟ್ಟಿಗೆ ಗೊಬ್ಬರ, ಎರೆಹುಳು ಗೊಬ್ಬರ, ಪುನರುತ್ಪಾದಕ ಕೃಷಿ ಮತ್ತು ಇತರ ಸುಸ್ಥಿರ ಕೃಷಿ ಚಟುವಟಿಕೆ ಕೈಗೊಂಡಿರುವ ರೈತರನ್ನು ಕೃಷಿ ಇಲಾಖೆ ಜತೆಯಲ್ಲಿ ಕೊಂಡೊಯ್ಯಲಿದೆ.

ಗುರುತಿಸಲು ಗುಣಲಕ್ಷಣ: ರೈತರು ತಲೆಮಾರುಗಳಿಂದ ಬೆಳೆದ ಸಾಂಪ್ರದಾಯಿಕ ಪ್ರಭೇದಗಳು, ಸ್ಥಳೀಯ ಕೃಷಿ ಪದ್ಧತಿ ಮತ್ತು ಪ್ರದೇಶಕ್ಕೆ ಹೊಂದಿಕೊಂಡಿರಬೇಕು. ದೇಸಿ ತಳಿಗಳು ವಿಶಿಷ್ಟವಾದ ಗುಣಲಕ್ಷಣಗಳನ್ನು ಹೊಂದಿರಬೇಕು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

 

Share This Article
error: Content is protected !!
";