ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಾಜಿ ಪ್ರಧಾನಮಂತ್ರಿ ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ.ದೇವೇಗೌಡ ಅವರು, ರಾಜ್ಯಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ರಾಜ್ಯದ ಹಿತದೃಷ್ಟಿಯಿಂದ ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣಕ್ಕೆ ಅನುಮತಿ ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.
ಜೊತೆಗೆ ತಮ್ಮ ಅವಧಿಯಲ್ಲಿ ಮಂಜೂರಾಗಿದ್ದ, ಬೆಂಗಳೂರಿನ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಪ್ರಯಾಣಿಕರ ಒತ್ತಡ ಹೆಚ್ಚಾಗಿ, ಮತ್ತೊಂದು ವಿಮಾನ ನಿಲ್ದಾಣ ಅವಶ್ಯಕತೆ ಇದೆ ಎಂಬುದನ್ನು ಸದನಕ್ಕೆ ಮನವರಿಕೆ ಮಾಡಿಕೊಟ್ಟರು.
ಈ ವೇಳೆ ಕೇಂದ್ರ ವಿಮಾನ ಖಾತೆ ಸಚಿವರಾದ ಎಂ.ಎನ್.ಕೆರಾಮ್ ಅವರು, ಕರ್ನಾಟಕ ಸರ್ಕಾರ ಜಾಗವನ್ನು ಗುರುತಿಸಿದರೆ, ನಾವು ಮತ್ತೊಂದು ವಿಮಾನ ನಿಲ್ದಾಣಕ್ಕೆ ಅನುಮತಿ ಕೊಡುತ್ತೇವೆ ಎಂದು ಸದನದಲ್ಲಿ ಉತ್ತರಿಸಿದರು.