ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
“ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಕೊಂದಿರುವ ಉಗ್ರರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ಕಠಿಣ ಕ್ರಮ ಕೈಗೊಳ್ಳಲು ಭಾರತೀಯ ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ ಎಂದು ಮಾಜಿ ಪ್ರಧಾನಮಂತ್ರಿ ಹೆಚ್.ಡಿ ದೇವೇಗೌಡರು ತಿಳಿಸಿದ್ದಾರೆ.
ಭಯೋತ್ಪಾದನೆಯನ್ನು ನಾಶಮಾಡಲು ಪ್ರಧಾನಿಯವರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡರು ತಿಳಿಸಿದ್ದಾರೆ.