ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದೇಶದಲ್ಲಿ ಜನರಿಂದ ತಿರಸ್ಕರಿಸಲ್ಪಟ್ಟ ಕಾಂಗ್ರೆಸ್‌ನೇತೃತ್ವದ ಇಂಡಿ ಕೂಟದ ಸಂಸದರು ಒಣ ಪ್ರತಿಷ್ಟೆಗಾಗಿ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಕಲಾಪಕ್ಕೆ ಅಡ್ಡಿ ಪಡಿಸುತ್ತಲೇ ಇದ್ದಾರೆ ಎಂದು ಮಾಜಿ ಪ್ರಧಾನಮಂತ್ರಿ, ರಾಜ್ಯಸಭಾ ಸದಸ್ಯ ಹೆಚ್.ಡಿ.ದೇವೇಗೌಡ ಆರೋಪಿಸಿದ್ದಾರೆ.
ಉಪರಾಷ್ಟ್ರಪತಿಗಳು ಹಾಗೂ ರಾಜ್ಯಸಭೆ ಸಭಾಪತಿಗಳಾದ ಜಗದೀಪ್‌ಧನಕರ್‌ಅವರ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಆಗ್ರಹಿಸಿ ರಾಜ್ಯಸಭೆಯಲ್ಲಿ ಗದ್ದಲ ಎಬ್ಬಿಸಿದ ಕಾಂಗ್ರೆಸ್‌ಮತ್ತು ಮಿತ್ರಪಕ್ಷಗಳ ಸದಸ್ಯರ ನಡೆಯನ್ನು ದೇವೇಗೌಡ ಅವರು ಎದ್ದುನಿಂತು ಖಂಡಿಸಿದರು.