ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಮಣಿಪಾಲ್‌ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಮಾಜಿ ಪ್ರಧಾನಮಂತ್ರಿಗಳು ಹಾಗೂ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡರವರು ಗುಣಮುಖರಾಗಿ ಸೋಮವಾರ ಮನೆಗೆ ಮರಳಿದ್ದಾರೆ ಎಂದು ಜೆಡಿಎಸ್ ತಿಳಿಸಿದೆ.
ವೈದ್ಯರ ಸೂಚನೆಯಂತೆ ದೇವೇಗೌಡರಿಗೆ ಇನ್ನೂ 15 ದಿನ ವಿಶ್ರಾಂತಿ ಅಗತ್ಯವಿದೆ. ಹೀಗಾಗಿ ಮುಖಂಡರು, ಕಾರ್ಯಕರ್ತರು ಮತ್ತು ಅಭಿಮಾನಿಗಳು ಭೇಟಿ ಮಾಡಲು ಅವರ ನಿವಾಸಕ್ಕೆ ದಯವಿಟ್ಟು ತೆರಳಬೇಡಿ ಎಂದು ಜೆಡಿಎಸ್ ವಿನಂತಿಸಿದೆ.
ಪೂಜ್ಯ ದೇವೇಗೌಡರು ವಿಶ್ರಾಂತಿ ಬಳಿಕ, ಪಕ್ಷದ ಕೇಂದ್ರ ಕಚೇರಿ ಜೆ.ಪಿ. ಭವನಕ್ಕೆ ಖುದ್ದು ಆಗಮಿಸಿ ಎಲ್ಲರನ್ನೂ ಭೇಟಿಯಾಗಲಿದ್ದಾರೆ ಎಂದು ಜೆಡಿಎಸ್ ತಿಳಿಸಿದೆ.

