ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕದ ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಿಯಾಗದ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಅವರು, ಸಂಸತ್ತಿನಲ್ಲಿ ರಾಜ್ಯದ ಜನರ ಪರವಾಗಿ ಧ್ವನಿ ಎತ್ತುವುದರಲ್ಲಿ ಸದಾ ಮುಂದು ಎಂದು ಜೆಡಿಎಸ್ ತಿಳಿಸಿದೆ.
ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣದ ಅವಶ್ಯಕತೆ ಇದ್ದು, ಈ ವಿಚಾರವಾಗಿ ರಾಜ್ಯದಿಂದ ಆಯ್ಕೆಯಾಗಿರುವ ಯಾವುದೇ ಕಾಂಗ್ರೆಸ್ ಸಂಸದರು ಸಂಸತ್ತಿನಲ್ಲಿ ಗಟ್ಟಿಯಾಗಿ ಮಾತನಾಡುತ್ತಿಲ್ಲ.
ಆದರೆ, 93ರ ಇಳಿ ವಯಸ್ಸಿನಲ್ಲಿಯೂ ಹೆಚ್.ಡಿ.ದೇವೇಗೌಡರು, ರಾಜ್ಯಸಭೆಯಲ್ಲಿ ಬೆಂಗಳೂರಿಗೆ 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಬೇಕು ಎಂದು ಹಕ್ಕೊತ್ತಾಯ ಮಂಡಿಸಿದ್ದು, ಇದಕ್ಕೆ ಖ್ಯಾತೆ ತೆಗೆದ ತಮಿಳುನಾಡಿನ ಸದಸ್ಯರಿಗೆ ತಕ್ಕ ಪ್ರತ್ಯುತ್ತರವನ್ನು ದೇವೇಗೌಡರು ನೀಡಿ ಬಾಯಿಮುಚ್ಚಿಸಿದ್ದಾರೆ.
ಮಾಜಿ ಪ್ರಧಾನಿಗಳ ಮನವಿಗೆ ಸಕರಾತ್ಮವಾಗಿ ಸ್ಪಂದಿಸಿರುವ, ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಚಿವ ಎಂಎನ್ ಕೆ ರಾಂ ಅವರು, ಕರ್ನಾಟಕ ಸರ್ಕಾರ ಸೂಕ್ತ ಸ್ಥಳ ಗುರುತಿಸಿ ಪ್ರಸ್ತಾವನೆ ಸಲ್ಲಿಸಿದರೆ, ವಿಮಾನ ನಿಲ್ದಾಣಕ್ಕೆ ಸ್ಪಂದಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಜೆಡಿಎಸ್ ತಿಳಿಸಿದೆ.

