ಡಾ.ರಾಜುಕುಮಾರ್ ಅವರನ್ನು ರಾಜಕಾರಣಕ್ಕೆ ಕರೆತರುವ ಯತ್ನ ಮಾಡಿದ್ದ ದೇವೇಗೌಡರು 

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
1978ರಲ್ಲಿ ಚಿಕ್ಕಮಗಳೂರು ಲೋಕಸಭೆ ಉಪ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಅವರ ವಿರುದ್ಧ ಕನ್ನಡದ ಮೇರುನಟ ಡಾ.ರಾಜುಕುಮಾರ್ ಅವರನ್ನು ರಾಜಕಾರಣಕ್ಕೆ ಕರೆತಂದು ಚುನಾವಣೆಯಲ್ಲಿ ನಿಲ್ಲಿಸಲು ಮನದಲ್ಲಿ ತಂತ್ರ ರೂಪಿಸಿಕೊಂಡಿದ್ದ ಶ್ರೀಮಾನ್ ದೇವೇಗೌಡರು  ರಾಜುಕುಮಾರ್ ಅವರ ನಿವಾಸಕ್ಕೆ ತೆರಳಿ ಚಿಕ್ಕಮಗಳೂರು ಚುನಾವಣೆಗೆ ಸ್ಪರ್ಧಿಸಲು ಸಾಧ್ಯವೆ ಎಂಬ ವಿಚಾರದಲ್ಲಿ ಚರ್ಚಿಸಿದ್ದಾರೆ.

 ದೇವೇಗೌಡರ ಮನವಿಯನ್ನು ರಾಜುಕುಮಾರ್ ಅವರು ಮೌಲ್ಯಗಳ ಮಾತುಗಳಲ್ಲಿ ನಯವಾಗಿ ನಿರಾಕರಿಸಿದ್ದಾರೆ. ಈ ವಿಚಾರದಲ್ಲಿ ದೇವೇಗೌಡರು ಮಾಧ್ಯಮದ ಸಂದರ್ಶನದಲ್ಲಿ ರಾಜುಕುಮಾರ್ ಅವರ ಆದರ್ಶ ವ್ಯಕ್ತಿತ್ವವನ್ನು ಕೊಂಡಾಡಿದ್ದಾರೆ.

ಇಂದಿರಾಗಾಂಧಿ ಅವರು ಚಿಕ್ಕಮಗಳೂರು ಲೋಕಸಭಾ ಉಪಚುನಾವಣೆ ಗೆಲುವು ಕಂಡರು. ಈ ಚುನಾವಣೆ ಸಂದರ್ಭದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಶ್ರೀ ದೇವರಾಜ್ ಅರಸು ಅವರು ಮುಖ್ಯಮಂತ್ರಿಯಾಗಿದ್ದರು.

ಈ ಚುನಾವಣೆ ಹಿನ್ನೆಲೆಯಲ್ಲಿ ಭಾಗಿಯಾಗಿದ್ದ ಅನೇಕ ಮುಖಂಡರಿಗೆ ರಾಜಕಾರಣದಲ್ಲಿ ಉತ್ತಮ ಭವಿಷ್ಯ ಪ್ರಾಪ್ತಿಯಾಗುತ್ತದೆ. ಈ ಚುನಾವಣೆಯ ನೇತೃತ್ವ ವಹಿಸಿದ್ದ ಪ್ರಮುಖರು ಆಸ್ಕರ್ ಫೆರ್ನಾಂಡಿಸ್.  ಜನಾರ್ಧನ ಪೂಜಾರಿ. ಬಿ ಕೆ ಹರಿಪ್ರಸಾದ್ ಸೇರಿದಂತೆ ಇನ್ನು ಕೆಲವು ಪ್ರಮುಖ ಮುಖಂಡರು ಮುಂದಾಳತ್ವ ವಹಿಸಿದ್ದರು ಎಂದು ರಘು ಗೌಡ ತಿಳಿಸಿದ್ದಾರೆ.

 

- Advertisement -  - Advertisement -  - Advertisement - 
Share This Article
error: Content is protected !!
";