ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಅನಾರೋಗ್ಯದಿಂದ ಬಳಲುತ್ತಿದ್ದು ಸೋಮವಾರ ಸಂಪೂರ್ಣ ಗುಣಮುಖರಾಗಿ ಡಿಸ್ಚಾರ್ಜ್ ಆಗಿ ಪದ್ಮನಾಭ ನಗರದ ತಮ್ಮ ಮನೆಗೆ ತೆರಳಿದ್ದಾರೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ದೇವೇಗೌಡರು ಮಣಿಪಾಲ್ ಆಸ್ಪತ್ರಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಹದಿನೈದು ದಿನ ಸಂಪೂರ್ಣ ವಿಶ್ರಾಂತಿಗೆ ವೈದ್ಯರು ಸಲಹೆ ನೀಡಿದ್ದು, ಅಭಿಮಾನಿಗಳು, ಕಾರ್ಯಕರ್ತರು ಸಹಕರಿಸಲು ಪಕ್ಷದಮುಖಂಡರು ಮನವಿ ಮಾಡಿದ್ದಾರೆ.
ಜ್ವರ ಹಾಗೂ ಮೂತ್ರದ ಸೋಂಕಿನಿಂದ ಬಳಲುತ್ತಿದ್ದ 92 ವರ್ಷದ ಹೆಚ್.ಡಿ.ದೇವೇಗೌಡರು ಕಳೆದ ವಾರ ಸೋಮವಾರ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಆರೋಗ್ಯದ ಮೇಲೆ ವೈದ್ಯರ ವಿಶೇಷ ತಂಡ ನಿಕಟವಾಗಿ ನಿಗಾ ವಹಿಸಿತ್ತು.
ಆಸ್ಪತ್ರೆಯ ಐಸಿಯುನಲ್ಲಿ ಗೌಡರು ಚಿಕಿತ್ಸೆ ಪಡೆಯುತ್ತಿದ್ದರು.ಆರೋಗ್ಯ ಚೇತರಿಕೆ ಕಂಡ ಬಳಿಕ ಅವರನ್ನು ಸಾಮಾನ್ಯ ವಾರ್ಡ್ಗೆ ಸ್ಥಳಾಂತರಿಸಲಾಗಿತ್ತು.ಸಂಪೂರ್ಣ ಚೇತರಿಕೆ ಕಂಡಿರುವ ದೇವೇಗೌಡರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ.
ವಿಶ್ರಾಂತಿ:
ಮುಂದಿನ ಎರಡು ವಾರಗಳ ಕಾಲ ವಿಶ್ರಾಂತಿ ಪಡೆಯಲು ವೈದ್ಯರು ದೇವೇಗೌಡರಿಗೆ ಸಲಹೆ ನೀಡಿದ್ದಾರೆ. ಹಾಗಾಗಿ ಎರಡು ವಾರಗಳ ಕಾಲ ಗೌಡರು ರಾಜಕೀಯ ಚಟುವಟಿಕೆಯಿಂದ ದೂರ ಉಳಿಯಲಿದ್ದು ಅಭಿಮಾನಿಗಳು, ಕಾರ್ಯಕರ್ತರು, ಮುಖಂಡರು ಸಹಕರಿಸುವಂತೆ ಮನವಿ ಮಾಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ವಿ.ಸೋಮಣ್ಣ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿ ಹಲವು ನಾಯಕರು ಆಸ್ಪತ್ರೆಗೆ ಭೇಟಿ ನೀಡಿ ದೇವೇಗೌಡರ ಆರೋಗ್ಯ ವಿಚಾರಿಸಿ ಬೇಗಮುಖ ರಾಗುವಂತೆ ಆರೈಸಿದ್ದರು.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ದೇವೇಗೌಡರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.
ಬೆಂಗಳೂರಿನ ಪದ್ಮನಾಭ ನಗರದ ನಿವಾಸಕ್ಕೆ ಭೇಟಿ ನೀಡಿದ ಯತ್ನಾಳ್, ಮಾಜಿ ಪ್ರಧಾನಿಗಳ ಆರೋಗ್ಯ ವಿಚಾರಣೆ ಮಾಡಿ ಕೆಲ ಕಾಲ ಚರ್ಚೆ ನಡೆಸಿದರು.
ಪದ್ಮನಾಭ ನಗರದ ಅವರ ನಿವಾಸಕ್ಕೆ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ, ಶಾಸಕರಾದ ಮುನಿರತ್ನ, ಸತೀಶ್ ರೆಡ್ಡಿ, ಮುನಿರಾಜು, ರವಿ ಸುಬ್ರಹ್ಮಣ್ಯ ಅವರು ಭೇಟಿ ನೀಡಿ ಆರೋಗ್ಯ ವಿಚಾರಿಸಿ, ಆಶೀರ್ವಾದ ಪಡೆದರು.

