ದೇವೇಗೌಡರಿಂದ ನಿಖಿಲ್ ಪರ ಬಿರುಸಿನ ಮತಯಾಚನೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚನ್ನಪಟ್ಟಣ ವಿಧಾನಸಭೆ ವ್ಯಾಪ್ತಿಯ ಸುಳ್ಳೇರಿ ಮತ್ತು ಅಕ್ಕೂರು ಗ್ರಾಮಗಳಲ್ಲಿ ಹಮ್ಮಿಕೊಂಡಿದ್ದ ಪ್ರಚಾರ ಸಭೆಯಲ್ಲಿ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ
ಅವರು ಭಾಗವಹಿಸಿ,  NDA ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಪರ ಮತಯಾಚಿಸಿದರು.

- Advertisement - 

ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಜನರನ್ನು ಉದ್ದೇಶಿಸಿ ಮಾತನಾಡಿದ ದೇವೇಗೌಡರು, ಈ ಚುನಾವಣೆಯಲ್ಲಿ ನಿಖಿಲ್‌ಕುಮಾರಸ್ವಾಮಿ ಅವರಿಗೆ ಮತಹಾಕಿ ಗೆಲುವಿಗೆ ಸಹಕರಿಸಿ ಎಂದು ವಿನಂತಿಸಿಕೊಂಡರು. 

- Advertisement - 

ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಚನ್ನಪಟ್ಟಣದ ಪೀರ್‌ಸಾಬ್‌ಗಲ್ಲಿಯಲ್ಲಿರುವ ಅಕಿಲ್‌ಷಾ ಖಾದ್ರಿ ದರ್ಗಾದ ಧರ್ಮಗುರು ಸಯ್ಯದ್‌ಮಸನ್ನ ಷಾ ಅವರ ನಿವಾಸಕ್ಕೆ ಭೇಟಿ ನೀಡಿ ಚರ್ಚಿಸಿದರು.

- Advertisement - 

ಪರಿಷತ್‌ಸದಸ್ಯ ಬಿ.ಎಂ. ಫಾರೂಖ್‌, ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ರಾಜ್ಯಮಟ್ಟದ ಹಾಗೂ ತಾಲ್ಲೂಕು ಮಟ್ಟದ ಮುಖಂಡರು, ಪದಾಧಿಕಾರಿಗಳು  ಹಾಗೂ ಕಾರ್ಯಕರ್ತರು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

 

Share This Article
error: Content is protected !!
";